
ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ತಾರೀಕು 17/08/2024 ರಂದು
ಕರ್ನಾಟಕದ ಪಕ್ಷಿಗಳು ಮತ್ತು ಪ್ರಕೃತಿ ಸಂರಕ್ಷಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಮಣಿಪಾಲದ ಬರ್ಡಿಂಗ್ ಮತ್ತು ಕನ್ಸರ್ವೇಶನ್ ಟ್ರಸ್ಟ್ ನ ಟ್ರಸ್ಟಿ ಆಗಿರುವಂತಹ ಶ್ರೀಯುತ ತೇಜಸ್ವಿ ಆಚಾರ್ಯರವರು ಮಾತನಾಡಿ ವಿವಿದ ಟಿಂಕರಿಂಗ್ ಲ್ಯಾಬ್ ವತಿಯಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ರೊಟೇರಿಯನ್ ಶ್ರೀಯುತ ಶಿವಶಂಕರ್, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಬಂಡಿ, ಕಾರ್ಕಳ ಜ್ಞಾನಸುಧಾ ಪ್ರೌಢಶಾಲೆಯ ಉಪ ಪ್ರಾಂಶುಪಾಲೆಯಾದ ಶ್ರೀಮತಿ ವಾಣಿ.ಕೆ, ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶ್ರೀಮತಿ ದಿವ್ಯಾ ಕೆ ಕಾರ್ಯಕ್ರಮ ನಿರೂಪಿಸಿದರು.













