25.2 C
Udupi
Tuesday, March 17, 2026
spot_img
spot_img
HomeBlogಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರತ್ಯುಶ್ ಶೆಟ್ಟಿ ಜಿಲ್ಲಾಮಟ್ಟಕ್ಕೆ

ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರತ್ಯುಶ್ ಶೆಟ್ಟಿ ಜಿಲ್ಲಾಮಟ್ಟಕ್ಕೆ

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಹಾಗೂ ಸರಕಾರಿ ಪ್ರಾಥಮಿಕ ಶಾಲೆ ಶಿರ್ಲಾಲು ಸೂಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ಬಾಲಕ ಮತ್ತು
ಬಾಲಕಿಯರ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಅಥ್ಲೆಟಿಕ್ ಮೀಟ್ 2024 -25 ನಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಯಾದ ಪ್ರತ್ಯುಶ್ ಶೆಟ್ಟಿ 200 ಮೀ. ಓಟದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕವನ್ನು ಗಳಿಸುವ ಮೂಲಕ ಜಿಲ್ಲಾ ಮಟ್ಟದ
ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ 100ಮೀ.ಓಟದಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕವನ್ನು ಪಡೆದಿರುತ್ತಾರೆ.

ಇವರು ಕಾರ್ಕಳದ ಶ್ರೀ ಪ್ರಶಾಂತ್ ಶೆಟ್ಟಿ ಹಾಗೂ ಶ್ರೀಮತಿ ಸಾರಿಕಾ ಶೆಟ್ಟಿ ದಂಪತಿಯ
ಸುಪುತ್ರನಾಗಿರುತ್ತಾರೆ. ಇವರನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ
ಶೆಟ್ಟಿಯವರು ಅಭಿನಂದಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page