
ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆ ಗಣಿತ ನಗರದಲ್ಲಿ ವಿಶ್ವ ಪರಿಸರ ದಿನವನ್ನು ಜೂನ್ 5ರಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವು ಬೆಳಿಗ್ಗೆ ಶಾಲಾ ಪ್ರಾರ್ಥನೆಯೊಂದಿಗೆ ಆರಂಭವಾಯಿತು.
ವಿಶ್ವ ಪರಿಸರ ದಿನವನ್ನು ಗಿಡ ನೆಡುವುದು ಮತ್ತು “ಬೀಜದುಂಡೆ”ಗಳನ್ನು ವಿದ್ಯಾರ್ಥಿಗಳಿಂದ ಸಹಶಿಕ್ಷಕಿ ಶ್ರೀಮತಿ ಗಾಯತ್ರಿಯವರ ನೇತೃತ್ವದಲ್ಲಿ ಮಾಡಿಸಲಾಯಿತು. ಈ ಸಂದರ್ಭದಲ್ಲಿ ಸಹಶಿಕ್ಷಕಿ ಅನಿಶಾ ಪರಿಸರವನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ, ಸ್ವಚ್ಛ ಪರಿಸರವನ್ನು ನಿರ್ಮಿಸುವ ಬಗ್ಗೆ ಮತ್ತು ಪರಿಸರ ಸಂರಕ್ಷಣೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿ, ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮತ್ತು ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಿನೇಶ್ಎಂ .ಕೊಡವೂರು ಮತ್ತು ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ಉಪಪ್ರಾಂಶುಪಾಲೆಯಾಗಿರುವ ಶ್ರೀಮತಿ ವಾಣಿ.ಕೆ ಹಾಗೂ ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳ ಜೊತೆಗೂಡಿದರು.

































