
ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ದಿನಾಂಕ 11/06/2026 ರಂದು ಶಾಲಾ ಸಂಸತ್
ಚುನಾವಣೆ ಕಾರ್ಯವು ಯಶಸ್ವಿಯಾಗಿ ನಡೆಯಿತು. ಚುನಾವಣೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ
ಮತದಾನದ ಹಕ್ಕನ್ನು ಚಲಾಯಿಸಿದರು. ಮತ ಎಣಿಕೆಯ ನಂತರ ವಿಜೇತರನ್ನು ಘೋಷಿಸಲಾಯಿತು. ಶಾಲಾ ನಾಯಕನಾಗಿ ಪ್ರದ್ಯೋತ್
ಪ್ರಮಲ್ ಹಾಗೂ ಉಪನಾಯಕಿಯಾಗಿ ಸಿನಿ ಶೆಟ್ಟಿಯವರು ಆಯ್ಕೆಯಾಗಿರುತ್ತಾರೆ. ಈ ಚುನಾವಣೆಯ ಮೂಲಕ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮೌಲ್ಯಗಳು, ನಾಯಕತ್ವದ ಗುಣಗಳು ಹಾಗೂ ಜವಾಬ್ದಾರಿಯ ಅರಿವು ಮೂಡಿಸಲಾಯಿತು.
ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲರಾದ ಶ್ರೀ ದಿನೇಶ್ ಎಂ
ಕೊಡವೂರು, ಇಂಜಿನಿಯರ್ ಶ್ರೀ ಪ್ರಶಾಂತ್ ಶೆಟ್ಟಿ, ಉಪ ಪ್ರಾಂಶುಪಾಲೆಯಾದ ಶ್ರೀಮತಿ ವಾಣಿ. ಕೆ ಹಾಗೂ ಶಿಕ್ಷಕರು ವಿಜೇತ
ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ, ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವಂತೆ ಕರೆ ನೀಡಿದರು.

































