29.3 C
Udupi
Thursday, April 2, 2026
spot_img
spot_img
HomeBlogಕಾರ್ಕಳ ಜ್ಞಾನಸುಧಾ ವಿದ್ಯಾ ಸಂಸ್ಥೆಯ ಸಮಾಜಮುಖಿ ಕಾರ್ಯ,ಬಡ ಅರ್ಹ ಮಕ್ಕಳಿಗೆ ಉಚಿತ ಶಿಕ್ಷಣ,

ಕಾರ್ಕಳ ಜ್ಞಾನಸುಧಾ ವಿದ್ಯಾ ಸಂಸ್ಥೆಯ ಸಮಾಜಮುಖಿ ಕಾರ್ಯ,ಬಡ ಅರ್ಹ ಮಕ್ಕಳಿಗೆ ಉಚಿತ ಶಿಕ್ಷಣ,

spot_imgspot_img

2026-27 ನೇ ಸಾಲಿನ ಪ್ರೌಢಶಾಲೆ ಮತ್ತು ವಾಣಿಜ್ಯ ವಿಭಾಗದ ಅರ್ಜಿ ಆಹ್ವಾನ

ಗಣಿತನಗರ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್
ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ ಕಾರ್ಕಳ
ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಟ್ರಸ್ಟಿನ ಸಮಾಜಮುಖಿ
ಕಾರ್ಯಕ್ರಮದ ಒಂದು ಭಾಗವಾಗಿ ಹಲವಾರು ವರ್ಷಗಳಿಂದ
ಕಾರ್ಕಳ ತಾಲೂಕಿನ ಬಡ ಅರ್ಹ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡಲಾಗುತ್ತಿದ್ದು, ಈ ಬಾರಿಯೂ 2026-27ನೇ ಶೈಕ್ಷಣಿಕ ಸಾಲಿನಲ್ಲಿ ,ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ 6 ರಿಂದ 10ನೇ ತರಗತಿಯವರೆಗೆ ಪ್ರತೀ ತರಗತಿಗೆ 5 ವಿದ್ಯಾರ್ಥಿಗಳಂತೆ ಉಚಿತ ಶಿಕ್ಷಣವನ್ನು ಮತ್ತು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ದಾಖಲಾತಿ ಬಯಸುವ ಹತ್ತನೇ ತರಗತಿಯಲ್ಲಿ ಶೇ 95ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಕಾಲೇಜು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಂಪೂರ್ಣ ಉಚಿತ ಶಿಕ್ಷಣ, ಶೇ90ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ, ಶೇ 85ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಕಾಲೇಜು ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ.


ಹೆಚ್ಚಿನ ಮಾಹಿತಿಗಾಗಿ ಆಸಕ್ತ ವಿದ್ಯಾರ್ಥಿಗಳು ಮತ್ತು
ಪೋಷಕರು ಸಂಸ್ಥೆಯ ಕಛೇರಿಯನ್ನು ಸಂಪರ್ಕಿಸಿ ಮಾಹಿತಿ
ಪಡೆದು ಕೊಳ್ಳಬಹುದು ಎಂದು ಸಂಸ್ಥೆಯು ಪ್ರಕಟಣೆಯಲ್ಲಿ
ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಶಾಲಾ ಕಛೇರಿ : 8147454907 ಕಾಲೇಜು
ಕಛೇರಿ : 8147454906, 7259500911

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page