28.2 C
Udupi
Friday, April 3, 2026
spot_img
spot_img
HomeBlogಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

spot_imgspot_img


ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕದ ಪದಾಧಿಕಾರಿಗಳ ಸಭೆಯು ಕಾರ್ಕಳದ ಪ್ರಕಾಶ್ ಹೋಟೆಲ್ ನಲ್ಲಿ ಜರುಗಿತ್ತು ಸಭೆಯು ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಭೆಯಲ್ಲಿ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ದಶಂಬರ ತಿಂಗಳ 28 ರಂದು ಕ್ರಿಯೇಟಿವ್ ಪುಸ್ತಕ ಮನೆಯ ಆಶ್ರಯದಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಸಪ್ತಗಿರಿ ಹಿರ್ಗಾನ ಇಲ್ಲಿ ನಡೆಸುವುದು ಎಂದು ನಿರ್ಣಯಿಸಲಾಯಿತು. ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವ ಬರೆಹಗಾರರು ಭಾಗವಹಿಸುವ ಬಗ್ಗೆ ಹಾಗೆಯೇ ಸಾಹಿತ್ಯ ಪರಿಷತ್ತಿನ ಸದಸ್ಯತ್ವದ ಅಭಿಯಾನಬಗ್ಗೆ ಹಾಗೂ ಕರಾವಳಿ ಕನ್ನಡ ಭಾಷಾ ವೈವಿಧ್ಯ ಕಾರ್ಯಕ್ರಮ ಮತ್ತು ತಾಲೂಕು ಮಟ್ಟದ ಕವಿಗೋಷ್ಠಿಯನ್ನು ಆಯೋಜಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು .

ಕಸಾಪ ಸದಸ್ಯರಾದ ಬೇಬಿ ಈಶ್ವರಮಂಗಲ, ಸಂಜೀವ ದೇವಾಡಿಗ, ಶಿವಸುಬ್ರಹ್ಮಣ್ಯ ಭಟ್ ,ರಮೇಶ್ ಪ್ರಭು ದೇವದಾಸ ನಾಯಕ್, ಸುಬ್ರಹ್ಮಣ್ಯ ಉಪಾಧ್ಯ, ನಾಗೇಶ್ ನಲ್ಲೂರು ,ಗಂಗಾಧರ ಪಣಿಯೂರು, ತಿಪ್ಪೆಸ್ವಾಮಿ, ಸುಲೋಚನಾ, ಶೈಲಜಾ ಹೆಗ್ಡೆ ಡಾ ಸುಮತಿ ಲಕ್ಷ್ಮೀ ಹೆಗ್ಡೆ ಉಪಸ್ಥಿತರಿದ್ದರು. ಸಂಘಟನಾ ಕಾರ್ಯದರ್ಶಿ ಗಣೇಶ್ ಜಾಲ್ಸೂರು ನಿರೂಪಿಸಿ ಕಾರ್ಯದರ್ಶಿ ದೇವದಾಸ್ ಕೆರೆಮನೆ ವಂದಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page