
ದಿನಾಂಕ 26.07. 25 ರಂದು ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಹಾಗೂ ಸರಕಾರಿ ಪ್ರೌಢ ಶಾಲೆ ಶಿವಪುರ ಇವರ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ. 17ರ ಒಳಗಿನ ವಯೋಮಿತಿಯ ಯೋಗಾಸನ ಸ್ಪರ್ಧೆಯಲ್ಲಿ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಟ್ರೆಡಿಶನಲ್ ಯೋಗಾಸನದಲ್ಲಿ ಮಾನ್ವಿ ಜಿ 9ನೇ ತರಗತಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹುಡುಗಿಯರ ರಿದಮಿಕ್ ಯೋಗಾಸನದಲ್ಲಿ ಶ್ರಾವಣಿ 9ನೇ ತರಗತಿ ದ್ವಿತೀಯ ಸ್ಥಾನಗಳಿಸಿರುತ್ತಾರೆ
ಇವರನ್ನು ಶಾಲಾ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ, ಶಾಲಾ ಮುಖ್ಯೋಪಾಧ್ಯಾಯಿನಿ ಯವರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದರು.