
ಕಾರ್ಕಳದ ನಲ್ಲೂರು ಪಾಜೆಗುಡ್ಡೆ ಬಳಿ ಮಿನಿ ಲಾರಿ ಮತ್ತು ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ಆಘಾತವಾಗಿದೆ.
ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿರುವುದು ಅತ್ಯಂತ ದುಃಖಕರ ಸಂಗತಿ. ಮೃತರು ಮೂಲತಃ ಕಾರ್ಕಳದ ನಲ್ಲೂರು ನಿವಾಸಿ ಸುರೇಶ್ ಆಚಾರ್ಯ ಹಾಗೂ ಅವರ ಮಕ್ಕಳು ಎಂಬುದಾಗಿ ತಿಳಿದು ಬಂದಿರುತ್ತದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಕುಟುಂಬ ವರ್ಗಕ್ಕೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಕಾರ್ಕಳದ ಶಾಸಕರಾದ ವಿ ಸುನಿಲ್ ಕುಮಾರ್ ಸಂತಾಪ ಸೂಚಿಸಿದ್ದಾರೆ.































































































































