
ಕಾರ್ಕಳ:ದಿನಾಂಕ 16/06/2025 ರ ರಾತ್ರಿ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿಟ್ಟೆ ಗ್ರಾಮದ ದಿನೇಶ್ ಶೆಟ್ಟಿಗಾರ್ ಎಂಬುವರ ತೋಟದಲ್ಲಿ ಬೆಳೆಸಿದ್ದ 4 ಲಕ್ಷ ಮೌಲ್ಯದ ಒಟ್ಟು 9 ಶ್ರೀಗಂಧದ ಮರಗಳನ್ನು ಖತರ್ನಾಕ್ ಗ್ಯಾಂಗ್ ಕಳ್ಳತನ ಮಾಡಿತ್ತು.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 84/2025, ಕಲಂ: 329(3), 303(2) ಭಾರತೀಯ ನ್ಯಾಯ ಸಂಹಿತೆ 2023 ಕಲಂ 86,87 ಕರ್ನಾಟಕ ಅರಣ್ಯ ಕಾಯ್ದೆ1963ರಂತೆ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೆತ್ತಿಕೊಂಡ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ಕಾನೂನು ಸುವ್ಯವಸ್ತೆ ಮತ್ತು ಸಂಚಾರ ವಿಭಾಗದ ಪಿ.ಎಸ್.ಐ. ಪ್ರಸನ್ನ ಎಮ್,ಎಸ್ ಮತ್ತು ತನಿಖಾ ವಿಭಾಗದ ಪಿ.ಎಸ್.ಐ. ಸುಂದರ ರವರ ತಂಡವು, ಆರೋಪಿಗಳಾದ ಗಣೇಶ್ ,ಸಂತೋಷ ಹಾಗೂ ಮೊಯ್ದೀನ್ @ ಮೊಯಿದು ಕುಂಞ ರನ್ನ ಬಂಧಿಸಿ ಅವರಿಂದ ಕಳುವಾದ ಗಂಧದ ಮರದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣದ ವಿಚಾರಣಾ ಸಮಯ ಆರೋಪಿಗಳು ಶಿರ್ವಾ ಠಾಣಾ ವ್ಯಾಪ್ತಿಯಲ್ಲಿ ಕೂಡಾ ಶ್ರೀ ಗಂಧದ ಮರಗಳನ್ನು ಕಳವು ಮಾಡಿರುವ ಬಗ್ಗೆ ಒಪ್ಪಿಕೊಂಡಿದ್ದಾರೆ. ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.