ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕಿನ ರೈತರು ಭಾಗಿಯಾಗಬೇಕು, ನವೀನ್ ನಾಯಕ್ ಮನವಿ

ಕಾರ್ಕಳ ನ. 4: ಭಾರತೀಯ ಜನತಾ ಪಾರ್ಟಿ ಕಾರ್ಕಳಮಂಡಲ ಕಾರ್ಕಳ ಮತ್ತು ಹಿಬ್ರು ತಾಲೂಕಿನಲ್ಲಿ ನವೆಂಬರ್ 5 ಮಂಗಳವಾರದಂದು ರೈತರ ಜಮೀನಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿರುವುದರ ವಿರುದ್ಧ ಪ್ರತಿಭಟನೆ ಆಯೋಜಿಸಲಾಗಿದೆ.
ಪ್ರತಿಭಟನೆ ಕುರಿತು ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಕಳ ಮತ್ತು ಹೆಬ್ರಿಯಲ್ಲಿ ನವಂಬರ್ ಐದರಂದು ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದ್ದು ಕಾರ್ಕಳದಲ್ಲಿ ಬೆಳಿಗ್ಗೆ 10 ಗಂಟೆಗೆ ಬಂಡಿಮಠ ಬಸ್ ನಿಲ್ದಾಣದಿಂದ ತಾಲೂಕು ಕಚೇರಿಯವರೆಗೆ ಮೆರವಣಿಗೆ ನಡೆಸಿ ವಕ್ಫ್ ಬೋರ್ಡ್ ನಲ್ಲಾಗಿರುವ ದಾಖಲೆಗಳ ತಿದ್ದುಪಡಿ ವ್ಯವಹಾರಗಳ ಕುರಿತು ಸಿಬಿಐ ಮತ್ತು ಇ.ಡಿ ತನಿಖೆ ನಡೆಸಲು ಒತ್ತಾಯಿಸಿ ತಹಶೀಲ್ದಾರ್ ಗೆ ಮನವಿ ಅರ್ಪಿಸಲಾಗುವುದು.
ನಂತರ ತಾಲೂಕಿನ ರೈತರು ಪಹಣಿ ನೀಡುವ ಕಿಟಕಿ ಎದುರು ಸರತಿಶಾಲಿನಲ್ಲಿ ನಿಂತು ತಮ್ಮ ಜಮೀನಿ ಹಪಣಿ ಪರಿಶೀಲನೆ ನಡೆಸಲಿದ್ದಾರೆ. ಹೆಬ್ರಿ ತಾಲೂಕಿನಲ್ಲೂ ಇದೇ ಮಾದರಿಯಲ್ಲಿ ಮಧ್ಯಾಹ್ನ 3:30ಕ್ಕೆ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಯಲ್ಲಿ ತಾಲೂಕಿನ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮಂಡಲ ಅಧ್ಯಕ್ಷರಾದ ನವೀನ್ ನಾಯಕ್ ಮನಭಿ ಮಾಡಿದ್ದಾರೆ.
ಸಭೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಮಹಾವೀರ್ ಹೆಗ್ಡೆ, ಮತ್ತು ಜಯರಾಮ್ ಸಾಲ್ಯಾನ್ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಕಾರ್ಯದರ್ಶಿ ಉದಯ ಕೋಟ್ಯಾನ್ ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

























































































































