
ಕಾರ್ಕಳ : ಬೈಲೂರು ಮಾಡ ಬಳಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರ ಮಣಿಪಾಲ ಮೂಲದ ಯುವಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಕಳದಿಂದ ಮಣಿಪಾಲ ಸಾಗುತ್ತಿದ್ದ ಬೈಕ್ ಮತ್ತು ಉಡುಪಿ ಕಡೆಯಿಂದ ಕಾರ್ಕಳದತ್ತ ಬರುತ್ತಿದ್ದ ಕಾರು ಮಧ್ಯೆ ಡಿಕ್ಕಿ ಸಂಭವಿಸಿದೆ.