26.3 C
Udupi
Tuesday, March 3, 2026
spot_img
spot_img
HomeBlogಕಾರ್ಕಳ : ಭಗವಾನ್‌ 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿ ರೆಂಜಾಳ ,

ಕಾರ್ಕಳ : ಭಗವಾನ್‌ 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿ ರೆಂಜಾಳ ,

ಮಾ. 6ರಿಂದ 8 ರವರೆಗೆ ಧಾಮ ಸಂಪ್ರೋಕ್ಷಣಾ ಪೂರ್ವಕ ಜಿನಬಿಂಬಗಳ ಪುನಃ ಪ್ರತಿಷ್ಠಾ ಮಹೋತ್ಸವ

ಕಾರ್ಕಳ : ಭಗವಾನ್‌ 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿ ರೆಂಜಾಳ ಇಲ್ಲಿ ಮಾ. 6ರಿಂದ 8 ರವರೆಗೆ ಧಾಮ ಸಂಪ್ರೋಕ್ಷಣಾ ಪೂರ್ವಕ ಜಿನಬಿಂಬಗಳ ಪುನಃ ಪ್ರತಿಷ್ಠಾ ಮಹೋತ್ಸವ ನೆರವೇರಲಿದೆ.

ಕಾರ್ಕಳ ಜೈನ ಮಠದ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ನೇತೃತ್ವ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಡೆಯುವ ಈ ಮಹೋತ್ಸವದಲ್ಲಿ ಮಾ. 6ರ ಪ್ರಾತಃಕಾಲದಿಂದ ಧಾರ್ಮಿಕ ವಿಧಿವಿಧಾನ ಜರುಗಲಿದೆ. ಸಂಜೆ 6 ಗಂಟೆಗೆ ನಡೆಯುವ ಧಾರ್ಮಿಕ ಸಭೆಯಲ್ಲಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು ದಿವ್ಯ ಉಪಸ್ಥಿತಿಯಲ್ಲಿರಲಿದ್ದು, ಮಾಜಿ ಸಚಿವ ಅಭಯಚಂದ್ರ ಜೈನ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯಕ್ಷಗಾನ ಶೈಲಿಯಲ್ಲಿ ಕಾವ್ಯ ವಾಚನ- ಪ್ರವಚನ ವೈಭವ (ಪ್ರಸಂಗ : ಜಿನಗಂಧೋದಕ ಮಹಿಮೆ) ನಡೆಯಲಿದ್ದು, ಕಾವ್ಯಶ್ರೀ ಅಜೇರು ಹಾಡುಗಾರಿಕೆಯಲ್ಲಿ ಮುನಿರಾಜ ರೆಂಜಾಲ ಮತ್ತವರ ತಂಡ ಪ್ರವಚನ ನೀಡಲಿದ್ದಾರೆ.

ಮಾ. 7ರ ಪ್ರಾತಃಕಾಲದಿಂದ ಧಾರ್ಮಿಕ ವಿಧಿವಿಧಾನ ಜರುಗಲಿದ್ದು. ಅಪರಾಹ್ನ 3ರಿಂದ ಪುರ ಮೆರವಣಿಗೆ ನಡೆಯಲಿದೆ. ಸಂಜೆ ರೆಂಜಾಳದ ಜೈನ ಬಾಂಧವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಂಜೆ 6 ಗಂಟೆಗೆ ನಡೆಯುವ ಧಾರ್ಮಿಕ ಸಭೆಯಲ್ಲಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ದಿವ್ಯ ಉಪಸ್ಥಿರಿರಲಿದ್ದು, ಮೂಡುಬಿದಿರೆ ಶ್ರೀ ಜೈನ ಮಠದ ಸ್ವಸ್ತೀ ಶ್ರೀ ಭಟ್ಟಾರಕ ಡಾ. ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಪ್ರತಿಮಾಧಾರಿ ಶ್ರಾವಕಿ ಡಾ. ಜಯಮಾಲಾ ಎನ್.‌ ಉಜಿರೆ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ವಿ. ಸುನಿಲ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಮಾ. 8ರ ಪ್ರಾತಃಕಾಲದಿಂದ ಧಾರ್ಮಿಕ ವಿಧಿವಿಧಾನ ನೆರವೇರಲಿದ್ದು, 11:20ರಿಂದ 11:28ರ ವೃಷಭ ಲಗ್ನದಲ್ಲಿ ಭ| 1008 ಶ್ರೀ ನೇಮಿನಾಥ ಸ್ವಾಮಿಗೆ 108 ಕಲಶಗಳಿಂದ ಮಹಾಭಿಷೇಕ, 12ರಿಂದ 12:25ರ ವೃಷಭ ಲಗ್ನದಲ್ಲಿ ಭ| 1008 ಶ್ರೀ ಚಂದ್ರನಾಥ ಸ್ವಾಮಿಯ ಪ್ರತಿಷ್ಠೆ, ತದನಂತರ 216 ಕಲಶಗಳಿಂದ ಮಹಾಭಿಷೇಕ, ಮಹಾಮಂಗಳಾರತಿ ನಡೆಯಲಿದೆ. ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವ ದಿವ್ಯ ಉಪಸ್ಥಿತಿಯಲ್ಲಿ ಸಂಜೆ ಗಂಟೆ 6 ರಿಂದ ನಡೆಯುವ ಧಾರ್ಮಿಕ ಸಭೆಯಲ್ಲಿ ನರಸಿಂಹರಾಜಪುರ ಅತಿಶಯ ಕ್ಷೇತ್ರ ಸಿಂಹನಗದ್ದೆಯ ಸ್ವಸ್ತಿ ಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವಿರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಾರ್ಕಳ ಶ್ರೀ ಲಲಿತಕೀರ್ತಿ ಯಕ್ಷಗಾನ ಕಲಾಮಂಡಳಿ ಕಾರ್ಕಳ ಇದರ ಸದಸ್ಯರಿಂದ ಕಮಠೋಪಸರ್ಗವಿಜಯಿ ಯಕ್ಷಗಾನ ಪ್ರಸಂಗ ಪ್ರದರ್ಶನಗೊಳ್ಳಲಿದೆ ಎಂದು ಬಸದಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಮಹಾವೀರ ಹೆಗ್ಡೆ ರೆಂಜಾಳ ಮತ್ತು ಆಡಳಿತ ಮೊಕ್ತೇಸರ ಪಾರ್ಶ್ವನಾಥ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page