27 C
Udupi
Sunday, June 7, 2026
spot_img
spot_img
HomeBlogಕಾರ್ಕಳ: ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಹುಟ್ಟು ಹಬ್ಬದ ಪ್ರಯುಕ್ತ ,ಜೂನ್ 8ರಂದು ಉಚಿತ ಆರೋಗ್ಯ...

ಕಾರ್ಕಳ: ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಹುಟ್ಟು ಹಬ್ಬದ ಪ್ರಯುಕ್ತ ,ಜೂನ್ 8ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಾರ್ಕಳ: ಉದಯ ಶೆಟ್ಟಿ ಮುನಿಯಾಲು ಅಭಿಮಾನಿ ಬಳಗ, ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಹಾಗೂ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ, ಕಾರ್ಕಳ ಇವರ ಸಹಯೋಗದಲ್ಲಿ ನೆಚ್ಚಿನ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರ ಹುಟ್ಟುಹಬ್ಬದ ಪ್ರಯುಕ್ತ ಕಾರ್ಕಳದಲ್ಲಿ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಇದರ ಅಂಗವಾಗಿ ಜೂನ್ 8, 2026ರಂದು ಸೋಮವಾರ ಬೆಳಗ್ಗೆ 9.30ರಿಂದ ಮಧ್ಯಾಹ್ನ 12.30ರವರೆಗೆ ಕಾರ್ಕಳ ಬಂಡಿಮಠದ ಶ್ರೀ ಮೂಡುಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.

ಶಿಬಿರದಲ್ಲಿ ವಿವಿಧ ಆರೋಗ್ಯ ಸೇವೆಗಳು ಲಭ್ಯವಿದ್ದು, ಪ್ರಮುಖವಾಗಿ:

  • ಬೃಹತ್ ರಕ್ತದಾನ ಶಿಬಿರ
  • ಉಚಿತ ಹೃದಯ ರೋಗ ತಪಾಸಣೆ, ಆರೋಗ್ಯ ತಪಾಸಣೆ ಹಾಗೂ ಕಣ್ಣಿನ ತಪಾಸಣೆ
  • ಕಾರ್ಕಳ ವಿಧಾನಸಭಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರಿಗೆ ಉಚಿತ ಆರೋಗ್ಯ ವಿಮೆ ಕಾರ್ಡ್ ವಿತರಣೆ
  • ಉಚಿತ ಸ್ತ್ರೀರೋಗ ತಪಾಸಣೆ ಶಿಬಿರ, ಎಲ್ಲಾ ಸ್ತ್ರೀರೋಗ ಮತ್ತು ಪ್ರಸೂತಿ ಸಮಸ್ಯೆಗಳಿಗೆ ಆಳ್ವಾಸ್ ಆಸ್ಪತ್ರೆಯ ತಜ್ಞ ವೈದ್ಯರಿಂದ ತಪಾಸಣೆ.

ಆಯೋಜಕರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page