
ಕಾರ್ಕಳ: ಡಿಸೆಂಬರ್ 10 ರಂದು ಕುಕ್ಕುಂದೂರು ಗ್ರಾಮದ ಗ್ರೀನ್ ಲ್ಯಾಂಡ್ ಫ್ಯಾಕ್ಟರಿ ಬಳಿ ಅತಿ ವೇಗವಾಗಿ ಬಂದ ಕಾರೊಂದು ಪಾದಾಚಾರಿಗೆ ಡಿಕ್ಕಿಯಾಗಿದ್ದು ಪರಿಣಾಮ ಪಾದಾಚಾರಿ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ದಿನಕರ ಪೂಜಾರಿ (50) ಎಂಬವರು ಮೃತ ದುರ್ದೈವಿಯಾಗಿದ್ದು ಇವರು ಅಯ್ಯಪ್ಪ ನಗರದಿಂದ ಜಾರ್ಕಳದ ಕಡೆಗೆ ನಡೆದುಕೊಂಡು ಹೋಗುತ್ತಿರುವ ವೇಳೆ ನಾಗೇಶ್ ಪೈ ಎಂಬಾತ ಕಾರನ್ನು ಅತಿ ವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ದಿನಕರ ಪೂಜಾರಿ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ದಿನಕರ ಪೂಜಾರಿಯವರು ಡಾಮರು ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





