29.8 C
Udupi
Wednesday, March 18, 2026
spot_img
spot_img
HomeBlogಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ, ಸೇತುವೆಗಳ ನಿರ್ಮಾಣಕ್ಕೆ ೦4.50 ಕೋಟಿ ರೂ. ಅನುದಾನ ಮಂಜೂರು: ವಿ....

ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ, ಸೇತುವೆಗಳ ನಿರ್ಮಾಣಕ್ಕೆ ೦4.50 ಕೋಟಿ ರೂ. ಅನುದಾನ ಮಂಜೂರು: ವಿ. ಸುನಿಲ್ ಕುಮಾರ್

ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸೇತುವೆಗಳ ನಿರ್ಮಾಣಕ್ಕೆ ರೂ. 04.50 ಕೋಟಿ ರೂಪಾಯಿ ಅನುದಾನ ಮಂಜೂರು – ವಿ ಸುನಿಲ್‌ ಕುಮಾರ್

ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾರ್ಕಳ ತಾಲೂಕು ವ್ಯಾಫ್ತಿಯಲ್ಲಿ ಜಿಲ್ಲಾ ಮುಖ್ಯರಸ್ತೆಗಳಲ್ಲಿ ಹಾದು ಹೋಗುವ 03 ಸೇತುವೆಗಳ ಮರು ನಿರ್ಮಾಣ ಕಾಮಗಾರಿಗಳಿಗೆ ತಲಾ 1.50 ಕೋಟಿ ವೆಚ್ಚದಲ್ಲಿ ಅಭಿವೃದದಿ ಪಡಿಸಲು ಒಟ್ಟು 4.50 ಕೋಟಿ ರೂಪಾಯಿ ಅನುದಾನ ಮಂಜೂರಾಗಿ ಸರ್ಕಾರದ ಆಡಳಿತಾತ್ಮಕ ಅನುಮೋದನೆ ಆಗಿರುತ್ತದೆ.

ಕಾರ್ಕಳದ ಗ್ರಾಮೀಣ ಪ್ರದೇಶದ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಪ್ರಮುಖ ಸೇತುವೆಗಳ ಮರು ನಿರ್ಮಾಣದ ಪೈಕಿ ಕುಕ್ಕುಂದೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಾರ್ಕಳ ನಕ್ರೆ ರಂಗನಪಲ್ಕೆ ಜಿಲ್ಲಾ ಮುಖ್ಯರಸ್ತೆಯ ಪರಪು ಎಂಬಲ್ಲಿ ಸೇತುವೆಯ ಮರು ನಿರ್ಮಾಣ ಕಾಮಗಾರಿ, ರೆಂಜಾಳ ನೆಲ್ಲಿಕಾರು ಜಿಲ್ಲಾ ಮುಖ್ಯರಸ್ತೆಯ ರೆಂಜಾಳ ಗ್ರಾಮ ಪಂಚಾಯತ್‌ ಬಳಿ ಸೇತುವೆಯ ಮರು ನಿರ್ಮಾಣ ಹಾಗೂ ಬೋಳ ಗ್ರಾಮದ ಶ್ರೀ ಮೃತ್ಯುಂಜಯ ಸ್ವಾಮಿ ದೇವಸ್ಥಾನದ ಬಳಿ ಸೇತುವೆ ಅಭಿವೃದ್ದಿ ಕಾಮಗಾರಿಗಳಿಗೆ ಅನುದಾನ ಮಂಜೂರಾಗಿರುತ್ತದೆ.

ಸಾರ್ವಜನಿಕರ ಹಾಗೂ ವಾಹನಗಳ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸೇತುವೆಗಳ ನಿರ್ಮಾಣಕ್ಕೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಹಾಗೂ ಇಲಾಖಾ ಸಚಿವರಿಗೆ ಪತ್ರ ಮುಖೇನ ಮನವಿ ಮಾಡಲಾಗಿತ್ತು. ಇದರ ಪರಿಣಾಮವಾಗಿ ಕಾರ್ಕಳ ವಿಧಾನ ಸಭಾ ಕ್ಷೇತ್ರಕ್ಕೆ 04.50 ಕೋಟಿ ರೂ ಅನುದಾನ ಮಂಜೂರಾಗಿ ಸದ್ರಿ ಸೇತುವೆಗಳ ಮರು ನಿರ್ಮಾಣ ಕಾರ್ಯಕ್ಕೆ ಸರಕಾರದ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು ಆದಷ್ಟು ಶೀಘ್ರವಾಗಿ ಇಲಾಖಾ ಪ್ರಕ್ರಿಯೆಗಳನ್ನು ಮುಗಿಸಿ ಕಾಮಗಾರಿಗಳನ್ನು ಆರಂಭಿಸಲಾಗುವುದು ಎಂದು ವಿಕಾಸ ಶಾಸಕರ ಜನಸೇವಾ ಕಛೇರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page