
ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರ ಬೆಂಗಳೂರು ಸೌತ್ ಇಲ್ಲಿ ದಿ. ಡಿಸೆಂಬರ್ 19 ರಿಂದ ಡಿಸೆಂಬರ್ 24ರ ವರೆಗೆ ನಡೆದ ಪಾನ್ ಇಂಡಿಯಾ ಚಳಿಗಾಲ ಉತ್ಸವ ಕ್ರೀಡಾಕೂಟದಲ್ಲಿ ಭಾಗವಹಿಸಿದ ಮಕ್ಕಳಿಗೆ ಜ.ಮೂರರಂದು ರಂದು ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಸೋನಾಲ್ .ಆರ್ ಕಾಮತ್ ಇವರು ಸ್ಮರಣಿಕೆಯನ್ನು ನೀಡಿ ಪ್ರೋತ್ಸಾಹಿಸಿದರು
.
ಈ ಕ್ರೀಡೋತ್ಸವದಲ್ಲಿ ಸಾಧನೆಯನ್ನು ಮಾಡಿದ ಎಂಟನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸುಜನ್ಯ ಹಾಗೂ ಅವರ ತಾಯಿ ಶ್ರೀಮತಿ ಜ್ಯೋತಿ ಇವರನ್ನು ಸನ್ಮಾನಿಸಿ, ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಸೋನಾಲ್ .ಆರ್ ಕಾಮತ್ ಇವರು ಮಕ್ಕಳನ್ನು ಉದ್ದೇಶಿಸಿ ಪ್ರೋತ್ಸಾಹದಾಯಕ ಮಾತುಗಳನ್ನಾಡಿದರು.
ಸಾಧನೆಯನ್ನು ಮಾಡಿದ ವಿದ್ಯಾರ್ಥಿನಿಗೆ ಮುಂದಿನ ಶೈಕ್ಷಣಿಕ ವರ್ಷದ ಪುಸ್ತಕ ಶುಲ್ಕದಲ್ಲಿ 50 ಶೇಕಡಾ ರಿಯಾಯಿತಿಯನ್ನು ನೀಡಲಾಗುವುದು ಎಂದು ಘೋ ಷಿಸುವುದರೊಂದಿಗೆ ಮಕ್ಕಳಿಗೆ ಮುಂಬರುವ ದಿನಗಳಲ್ಲಿ ಹೆಚ್ಚು ಭಾಗವಹಿಸುವಿಕೆಗೆ ಉತ್ತೇಜನವನ್ನು ನೀಡಿದರು.ಕುಮಾರಿ ಸುಜನ್ಯಾ ಇವರು ಕ್ರೀಡಾರಂಗದಲ್ಲಿ ಇನ್ನಷ್ಟು ಸಾಧನೆಯನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿ, ಅವರಿಗೆ ಸ್ಮರಣಿಕೆಯನ್ನು ನೀಡಿ ಶಾಲು ಹೊದಿಸಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.































































































































