
ಕಾರ್ಕಳ : ಷೇರು ಮಾರುಕಟ್ಟೆಯ ವ್ಯವಹಾರದಲ್ಲಿ ನಷ್ಟ ಉಂಟಾಗಿದ್ದ ಕಾರಣ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಬೆಳ್ಮಾಣು ಗ್ರಾಮದ ದಿನೇಶ್ ಎಂ (34) ಬ್ಯಾಂಕಿನ ಮಾಜಿ ಉದ್ಯೋಗಿಯಾಗಿದ್ದು ಶೇರು ಮಾರುಕಟ್ಟೆಯಲ್ಲಿ ವ್ಯವಹಾರ ನಡೆಸುತ್ತಿದ್ದು, ವ್ಯವಹಾರದಲ್ಲಿ ನಷ್ಟ ಉಂಟಾದ ಕಾರಣ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.































































































































