27.5 C
Udupi
Friday, July 31, 2026
spot_img
spot_img
HomeBlogಕುಂದಾಪುರದಲ್ಲಿ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ; ಆರೋಪಿ ಪರಾರಿ

ಕುಂದಾಪುರದಲ್ಲಿ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ; ಆರೋಪಿ ಪರಾರಿ

ಕುಂದಾಪುರ: ಕುಂದಾಪುರದ ಚರ್ಚ್ ರಸ್ತೆಯಲ್ಲಿರುವ ಹೋಲಿ ರೋಸರಿ ಚರ್ಚ್ ಎದುರು ಶುಕ್ರವಾರ (ಜು.31) ಮುಂಜಾನೆ ಸುಮಾರು 3.30ರ ವೇಳೆಗೆ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಮೃತರನ್ನು ಬಾರ್ಕೂರು ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಎಂದು ಗುರುತಿಸಲಾಗಿದೆ. ಹಣಕಾಸು ವ್ಯವಹಾರ ನಡೆಸುತ್ತಿದ್ದ ಅವರು ತಮ್ಮ ಮೊದಲ ಪತ್ನಿ ಸೆಲ್ಮಾ ಮಸ್ಕರೆನ್ಸ್ ಅವರನ್ನು ತೊರೆದು ಬಾರ್ಕೂರು ಮೂಲದ ಮಹಿಳೆಯೊಂದಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ.

ಶುಕ್ರವಾರ ಮುಂಜಾನೆ ಮಹಿಳೆಯೊಂದಿಗೆ ಕಾರಿನಲ್ಲಿ ಬಂದಿದ್ದ ವೇಳೆ ಆರೋಪಿ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದ ಐವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಹಿಳೆ ಆರೋಪಿಯನ್ನು ಗುರುತಿಸಿದ್ದು, ಪರಾರಿಯಾಗಿರುವ ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಹಣಕಾಸು ಅಥವಾ ಇತರೆ ವ್ಯವಹಾರ ಸಂಬಂಧಿತ ವೈಷಮ್ಯವೇ ಕೊಲೆಗೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ಶಂಕಿಸಲಾಗಿದೆ.

ಘಟನಾ ಸ್ಥಳಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್, ಹೆಚ್ಚುವರಿ ಎಸ್‌ಪಿ ಸುಧಾಕರ್ ನಾಯಕ್, ಡಿವೈಎಸ್‌ಪಿ ಎಚ್.ಡಿ. ಕುಲಕರ್ಣಿ, ಕುಂದಾಪುರ ನಗರ ಠಾಣೆ ಇನ್‌ಸ್ಪೆಕ್ಟರ್ ಜಯರಾಮ ಗೌಡ ಹಾಗೂ ಪಿಎಸ್‌ಐಗಳಾದ ನಂಜಾ ನಾಯ್ಕ್, ಪುಷ್ಪಾ, ಅನೂಪ್ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page