
ಕುಂದಾಪುರ: ಮಂದಾರ್ತಿ 2ನೇ ಮೇಳದ ಪ್ರತಿಭಾನ್ವಿತ ಕಲಾವಿದರಾಗಿರುವ ಶೃಂಗೇರಿ ಸಮೀಪದ ನೆಮ್ಮಾರ್ ನಿವಾಸಿಯಾಗಿದ್ದ ಈಶ್ವರ ಗೌಡ ನಿನ್ನೆ ರಾತ್ರಿ ದೇವಿ ಮಾಹಾತ್ಮೆ ಪ್ರಸಂಗದಲ್ಲಿ ಮಹಿಷಾಸುರ ಪಾತ್ರ ಕೊನೆಯಾಗುತ್ತಿದ್ದಂತೆ ಸಂಪೂರ್ಣ ವೇಷ ಕಳಚುವ ಮುನ್ನ ಹೃದಯಾಘಾತದಿಂದ ಅಸ್ವಸ್ಥಗೊಂಡು ಸಾವನಪ್ಪಿದ್ದಾರೆ.
ವೇಷ ಕಳಚುವ ಮುನ್ನವೇ ಹೃದಯಾಘಾತದಿಂದ ಕುಸಿದು ಬಿದ್ದಿದ್ದು, ಸಹಕಲಾವಿದರು ಆಸ್ಪತ್ರೆಗೆ ಸಾಗಿಸುವ ಮುನ್ನವೇ ಇಹಲೋಕ ತ್ಯಜಿಸಿದ್ದರು. ಈಶ್ವರ ಗೌಡ ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.









