
ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು ,ಅದೇನಂದರೆ ಕುಡಿದು ಶಾಲಾ ಬಸ್‌ಗಳನ್ನು ಓಡಿಸಿದರೆ ಡ್ರೈವಿಂಗ್ ಲೈಸೆನ್ಸ್ ಕ್ಯಾನ್ಸಲ್ ಮಾಡುವುದಾಗಿ ಎಚ್ಚರಿಕೆ ನೀಡಿದೆ.
ಪೊಲೀಸ್ ಇಲಾಖೆಯಿಂದ ಶಿಫಾರಸು ಮಾಡಲ್ಪಟ್ಟ ಡಿಎಲ್‌ಗಳನ್ನು ಆರ್‌ಟಿಒ ಅಧಿಕಾರಿಗಳು ಅಮಾನತು ಮಾಡಲಿದ್ದಾರೆ. ಅಲ್ಲದೆ, ಶಾಲಾ/ಕಾಲೇಜು ವಾಹನಗಳ ಅರ್ಹತಾ ಪತ್ರ ನವೀಕರಣ ಮಾಡುವುದು ಕಡ್ಡಾಯವಾಗಿದ್ದು ನವೆಂಬರ್ 30ರ ಒಳಗೆ ಎಫ್‌ಸಿ ಮಾಡಿಸಿಕೊಳ್ಳಲು ಡೆಡ್‌ಲೈನ್ ವಿಧಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೊರರಾಜ್ಯದ ಬಸ್‌ಗಳಲ್ಲಿ ಅನಧಿಕೃತ ಲಗೇಜ್ ಕಂಡುಬಂದರೆ ವಾಹನಗಳ ಸೀಜ್ ಆಗಲಿದ್ದು ಹೊರರಾಜ್ಯಗಳಲ್ಲಿ ನೋಂದಣಿಗೊಂಡು ರಾಜ್ಯದಲ್ಲಿ ಸಂಚರಿಸುವ ವಾಹನಗಳಿಗೆ ರಾಜ್ಯದ ತೆರಿಗೆ ವಸೂಲಿಗೆ ಅಗತ್ಯ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆರ್‌ಟಿಒ ಕಚೇರಿ ಒಳಗೆ ಏಜೆಂಟ್ ಮುಖಾಂತರ ಡಿಎಲ್ ಸೇರಿದಂತೆ ಹಲವು ದಾಖಲೆಗಳನ್ನು ಕೊಟ್ಟರೆ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಆಗಲಿದೆ ಎಂದು ಹೇಳಿದ್ದಾರೆ.
ಇದಲ್ಲದೆ ರಾಜ್ಯದಲ್ಲಿ ಸಂಚರಿಸುವ ಎಲ್ಲಾ ಬಸ್‌ಗಳ ಹಿಂಭಾಗದಲ್ಲಿ ಎಮರ್ಜೆನ್ಸಿ ಡೋರ್ ಕಡ್ಡಾಯವಾಗಿರಬೇಕು ಎಂದು ಆದೇಶಿಸಲಾಗಿದೆ.






















































