31.4 C
Udupi
Thursday, May 21, 2026
spot_img
spot_img
HomeBlog"ಕೇಂದ್ರ ಸರ್ಕಾರವು 22 ಲಕ್ಷಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿದೆ"

“ಕೇಂದ್ರ ಸರ್ಕಾರವು 22 ಲಕ್ಷಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿದೆ”

ಇಟಲಿ ಪ್ರವಾಸದಲ್ಲಿರುವ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಅಮೇಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದೇಶದಲ್ಲಿ ನಿರುದ್ಯೋಗ, ಬೆಲೆ ಏರಿಕೆ ಹಾಗೂ ನೀಟ್ ಪರೀಕ್ಷೆ ವಿವಾದದಿಂದ ಯುವಕರು ಸಂಕಷ್ಟದಲ್ಲಿರುವಾಗ ಪ್ರಧಾನಿ ನರೇಂದ್ರ ಮೋದಿ ಇಟಲಿಯಲ್ಲಿ ‘ಮೆಲೋಡಿ’ ಚಾಕೋಲೇಟ್ ವಿಚಾರದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.

ದೇಶದ 22 ಲಕ್ಷಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಸರ್ಕಾರ ಆಟವಾಡುತ್ತಿದೆ. ಪೇಪರ್ ಲೀಕ್ ಪ್ರಕರಣಗಳನ್ನು ತಡೆಯಲು ವಿಫಲವಾದ ಕಾರಣ ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ. ಇದಲದೆ ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಯಿಂದ ಇಂಧನ ಪೂರೈಕೆಗೆ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ಈಗಾಗಲೇ ತೈಲ ಬೆಲೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ದೇಶದಲ್ಲಿ ಹಣದುಬ್ಬರ ಹೆಚ್ಚಾಗಬಹುದು ಎಂದು ರಾಹುಲ್ ಎಚ್ಚರಿಕೆ ನೀಡಿದರು.

ಪ್ರಧಾನಿ ಮೋದಿ ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದ್ದರೂ, ಅದೇ ವೇಳೆ ಇಟಲಿ ಪ್ರವಾಸದಲ್ಲಿ ತೊಡಗಿಸಿಕೊಂಡಿದ್ದಾರೆ. ಜನರ ನೈಜ ಸಮಸ್ಯೆಗಳಿಂದ ಗಮನ ಬೇರೆಡೆ ಸೆಳೆಯಲು ಇಂತಹ ನಡೆ ನಡೆಯುತ್ತಿದೆ ಎಂದು ರಾಹುಲ್ ಗಾಂಧಿ ಕಟುವಾಗಿ ಟೀಕಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page