
ಇಂದು ಕೇರಳಕ್ಕೆ ಮಾನ್ಸೂನ್ ಮಾರುತ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇನ್ನೆರಡು ದಿನಗಳಲ್ಲಿ ಕರಾವಳಿಗೆ ಮುಂಗಾರು ಮಳೆ ಪ್ರವೇಶಿಸಲಿದ್ದು, ಮಳೆಯಿಂದ ಉಂಟಾಗುವ ಅವಾಂತರಗಳು ಮತ್ತು ಪ್ರಾಣ ಹಾನಿಯ ಆತಂಕವನ್ನು ತಪ್ಪಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಮಳೆಯ ಅವಧಿಯಲ್ಲಿ, ಸಾರ್ವಜನಿಕರು ಹಾಗೂ ಪ್ರವಾಸಿಗರು ಗುಡ್ಡಗಾಡು ಪ್ರದೇಶಗಳಲ್ಲಿ ಚಾರಣ ಮತ್ತು ನದಿ ತೀರ , ಸಮುದ್ರ ತೀರಕ್ಕೆ ಇಳಿಯುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
































