
ಕೋಲ್ಕತ್ತಾ: ನಗರದ ಅರ್ ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಯನ್ನು ಖಂಡಿಸಿ ಶನಿವಾರ ಆಗಸ್ಟ್ 17ರಂದು ಖಾಸಗಿ ವೈದ್ಯಕೀಯ ಸಂಸ್ಥೆಗಳು (IMA) ಬಂದ್ ಗೆ ಕರೆ ನೀಡಿದೆ.

ವೈದ್ಯಯ ಅಮಾನುಷ ಹತ್ಯೆಯನ್ನು ಖಂಡಿಸಿ, ವೈದ್ಯರು ಮತ್ತು ವಿವಿಧ ವೈದ್ಯಕೀಯ ಸಂಸ್ಥೆಗಳ ಪ್ರತಿನಿಧಿಗಳು ದೇಶದ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳನ್ನು ಘೋಷಿಸಿದ್ದಾರೆ. ವೈದ್ಯರಿಗೆ ಸುರಕ್ಷಿತ ಕೆಲಸದ ವಾತಾವರಣವನ್ನು ಒದಗಿಸಲಾಗದ ಕುರಿತು ಸರಕಾರವನ್ನು ಹೈಕೋರ್ಟ್ ಪ್ರಶ್ನಿಸಿದೆ. ದೇಶಾದ್ಯಂತ ಬಂದ್ ಗೆ ಕರೆ ನೀಡಿರುವ ಹಿನ್ನೆಲೆ ನಾಳೆ ಆಗಸ್ಟ್ 17 ಬೆಳಿಗ್ಗೆ 6 ಯಿಂದ ಆ. 18ರ ಬೆಳಿಗ್ಗೆ 6 ಗಂಟೆಯವರೆಗೆ ತುರ್ತು ಚಿಕಿತ್ಸೆಯನ್ನು ಹೊರತುಪಡಿಸಿ, ಹೊರರೋಗಿಗಳ ಸೇವೆ ಸ್ಥಗಿತಗೊಳ್ಳಲಿದೆ ಎಂದು ಭಾರತೀಯ ವೈದ್ಯಕೀಯ ಸಂಘ ಘೋಷಿಸಿದೆ.














