
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯರವರು ಇತ್ತೀಚೆಗೆ ರಾಜ್ಯದಲ್ಲಿ ವಿಶೇಷವಾಗಿ ಹಾಸನ ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಹೃದಯಘಾತಗಳಿಗೆ ಕೋವಿಡ್ 19 ಲಸಿಕೆ ಕಾರಣ ಎಂದು ಹೇಳಿಕೆ ನೀಡಿದ್ದು ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿಯು ರಾಜ್ಯದಲ್ಲಿ ಕೋವಿಡ್ ತುತ್ತಾದವರಿಗೆ ಅಥವಾ ಕೋವಿಡ್ ಲಸಿಕೆ ಪಡೆದವರಿಗೂ ಹಠಾತ್ ಸಂಭವಿಸುತ್ತಿರುವ ಹೃದಯಘಾತ ಪ್ರಕರಣಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ತಜ್ಞರ ಸಮಿತಿ ವರದಿ ನೀಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಕ್ಷಮೆಯಾಚಿಸಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ‘ಸಿದ್ದರಾಮಯ್ಯ ಅವರ ಹೇಳಿಕೆಗಳು ಬೇಜವಾಬ್ದಾರಿತನದ್ದಾಗಿದ್ದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ಮತ್ತು AIMS ದೆಹಲಿ ಸೇರಿದಂತೆ ಪ್ರಮುಖ ರಾಷ್ಟ್ರೀಯ ಸಂಸ್ಥೆಗಳು ಕೋವಿಡ್ 19 ಲಸಿಕೆಗಳು ಹೃದಯಾಘಾತಕೆ ಕಾರಣವಾಗಿದೆ ಎಂಬುದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಸ್ಪಷ್ಟಪಡಿಸಿದೆ.
ಪ್ರಧಾನಿ ಮೋದಿ ಅವರ ಅಧಿಕಾರ ಅವಧಿಯಲ್ಲಿ ಲಸಿಕೆಯನ್ನು ಅಭಿವೃದ್ಧಿಪಡಿಸಲಾಗಿದೆ ಎಂಬ ಕಾರಣಕ್ಕಾಗಿ ಸಿದ್ದರಾಮಯ್ಯ ಅವರು ಉದ್ದೇಶಪೂರ್ವಕವಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.