
ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ, ಕರ್ನಾಟಕ
ಸರಕಾರ ಹಾಗೂ ಎಮ್.ಜಿ.ಎಮ್ ಪದವಿಪೂರ್ವ ಕಾಲೇಜು ಉಡುಪಿ ಇವರ
ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ವಿಭಾಗದ
ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್
ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ
ಕಿಯೋರಾ ಪಾಯಸ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈ ಮೂಲಕ
ಪದವಿಪೂರ್ವ ಶಿಕ್ಷಣ ಇಲಾಖೆಯ ಪಂದ್ಯಾಟದಲ್ಲಿ ಕಿಯೋರಾ ಪಾಯಸ್
ಸತತ ಮೂರನೇ ಬಾರಿಗೆ ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾದ
ಹೆಗ್ಗಳಿಕೆ ಪಡೆದುಕೊಂಡಂತಾಗಿದೆ.































































































































