
ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ, ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆ ಕೋಡಿ ಕನ್ಯಾನ, ಬ್ರಹ್ಮಾವರ ಇಲ್ಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಚೆಸ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೆöÊಸ್ಟ್ಕಿಂಗ್ ಆಂಗ್ಲಮಾಧ್ಯಮ
ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ವರುಣ್ ಕಾಮತ್
ಪ್ರಥಮ ಸ್ಥಾನ ಪಡೆದು ಹಾಸನದಲ್ಲಿ ನಡೆಯಲಿರುವ ರಾಜ್ಯಮಟ್ಟದ
ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾನೆ. ಕಳೆದ ಸಾಲಿನಲ್ಲಿಯೂ ಪ್ರಾಥಮಿಕ
ವಿಭಾಗದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು ಈ ವರ್ಷವೂ
ಆಯ್ಕೆಯಾಗುವುದರೊಂದಿಗೆ ವರುಣ್ ಕಾಮತ್ ಸತತ ಎರಡನೇ
ಬಾರಿಗೆ ಶಿಕ್ಷಣ ಇಲಾಖೆಯ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ
ಆಯ್ಕೆಯಾದಂತಾಗಿದೆ.













