
ಕಾರ್ಕಳ: ಇಲ್ಲಿನ ಕ್ರೈಸ್ ಕಿಂಗ್ ಪದವಿ ಪೂರ್ವ ಕಾಲೇಜಿನಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪದವಿಪೂರ್ವ ಹಾಗೂ
ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಅಂತರ್ಮಟ್ಟದ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸ್ಪರ್ಧೆ ‘ಅನ್ವೇಷಣೆ
2024’ ಅದ್ದೂರಿಯಾಗಿ ನಡೆಯಿತು.
ಬೆಳಗ್ಗೆ ನಡೆದ ಉದ್ಘಾಟನಾ
ಸಮಾರಂಭದಲ್ಲಿ ಕಾರ್ಕಳದ ವಕೀಲರಾದ ಶ್ರೀಮತಿ ಶಶಿರೇಖಾ
ಎಚ್ ಎಮ್ ಅವರು ಮುಖ್ಯ ಅತಿಥಿಗಳಾಗಿದ್ದರು. ಅವರು ದೀಪ ಬೆಳಗಿ
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು
“ವಿದ್ಯಾರ್ಥಿಗಳಲ್ಲಿ ನಾಯಕತ್ವ ಮನೋಭಾವ
ಬೆಳೆಯಬೇಕೆಂದರೆ ಅನ್ವೇಷಣೆಯಂತಹ ಕಾರ್ಯಕ್ರಮ
ಅತೀ ಮುಖ್ಯ” ಎಂದು ಹೇಳಿದರು. ಇನ್ನೋರ್ವ ಅತಿಥಿ ಕಾರ್ಕಳ ಸಿಟಿ
ಲಯನ್ಸ್ ಕಬ್ಲ್ನ ಅಧ್ಯಕ್ಷರಾದ ಶ್ರೀಮತಿ ಜ್ಯೋತಿ ರಮೇಶ್
ಮಾತನಾಡಿ “ಮಕ್ಕಳ ಪ್ರತಿಭೆಗಳನ್ನು ಅನಾವರಣಗೊಳಿಸಲು
ಅನ್ವೇಷಣೆ ಕಾರ್ಯಕ್ರಮ ಸೂಕ್ತ ವೇದಿಕೆಯಾಗಿದೆ” ಎಂದು
ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ
ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್ ನ ಸದಸ್ಯರಾದ ಡಾ.ಪೀಟರ್
ಫೆರ್ನಾಂಡಿಸ್ ಅವರು ಮಾತನಾಡಿ “ವಿದ್ಯಾರ್ಥಿಗಳ ನಾಳಿನ
ಭವಿಷ್ಯವನ್ನು ನಿರ್ಧರಿಸಲು ಇಂದು ಸುದಿನವಾಗಿರುತ್ತದೆ.
ಅವಕಾಶಗಳು ಎಲ್ಲರಿಗೂ ಸಮಾನವಾಗಿ ಸಿಗುತ್ತದೆ, ಸಿಕ್ಕಂತಹ
ಅವಕಾಶವನ್ನು ಸದುಪಯೋಗ ಪಡಿಸಿಕೊಂಡವರು
ಜಯಶಾಲಿಗಳಾಗಬಹುದು” ಎಂದು ಹೇಳಿದರು. ಕಾರ್ಕಳ ಆಯಿಷಾ
ಜ್ಯುವೆಲ್ಲರ್ಸ್ ಮಾಲಿಕರಾದ ಮೊಹಮ್ಮದ್ ಅಸ್ಲಂ, ಕಾರ್ಕಳ ಬಸ್ಸು
ಎಜೆಂಟರ ಸಂಘದ ಅಧ್ಯಕ್ಷರಾದ ರಾಜೇಂದ್ರ ಪ್ರಸಾದ್,
ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಮಾಜಿ ಅಧ್ಯಕ್ಷೆ ಶ್ರೀಮತಿ
ಕವಿತಾ ಪಾಯಸ್, ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ
ಅಧ್ಯಕ್ಷ ಶ್ರೀ ಪ್ರಕಾಶ್ ಡಿಸೋಜ ಅವರು ಸ್ಪರ್ಧಿಗಳಿಗೆ ಶುಭ
ಹಾರೈಸಿದರು. ಪ್ರಾಚಾರ್ಯರಾದ ಲಕ್ಷ್ಮೀನಾರಾಯಣ ಕಾಮತ್
ಪ್ರಸ್ತಾವನೆಗೈದರು, ಶ್ರೀಮತಿ ಸುಕನ್ಯಾ ಜೈನ್ ಸ್ವಾಗತಿಸಿ,
ದೀಪಕ್ ಕೆ ಅವರು ನಿರೂಪಿಸಿ ವಂದಿಸಿದರು. ಸಂಜೆ ನಡೆದ
ಸಮಾರೋಪ ಸಮಾರಂಭದಲ್ಲಿ ಸರಕಾರಿ ಪದವಿ ಪೂರ್ವ
ಕಾಲೇಜು, ಪಾಲಿಮಾರು ಇಲ್ಲಿನ ನಿವೃತ್ತ ಉಪ ಪ್ರಾಚಾರ್ಯರಾದ
ಶಿವಾನಂದ ಕೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ ಶಿಕ್ಷಕ- ರಕ್ಷಕ ಸಂಘದ ಮಾಜಿ
ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಅತಿಥಿಗಳಾಗಿದ್ದರು. ವಿವಿಧ
ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ
ಬಹುಮಾನ ವಿತರಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ
ಲಕ್ಷ್ಮೀನಾರಾಯಣ ಕಾಮತ್, ಉಪಪ್ರಾಚಾರ್ಯ ಡಾ. ಪ್ರಕಾಶ್ ಭಟ್,
ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯ
ಶಿಕ್ಷಕ ಡೊಮಿನಿಕ್ ಅಂದ್ರಾದೆ, ಕ್ರೈಸ್ಟ್ ಕಿಂಗ್ ಅಂಗ್ಲಮಾಧ್ಯಮ
ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ರುಢಾಲ್ಫ್ ಕಿಶೋರ್
ಲೋಬೋ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕಿ ಶ್ರೀಮತಿ
ಪಾವನ ಇವರು ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು
ಹಾಗೂ ಉಪನ್ಯಾಸಕಿ ಶ್ರೀಮತಿ ಶಿಜಿ ಸಿ ಕೆ ಕಾರ್ಯಕ್ರಮ ನಿರೂಪಿಸಿ
ವಂದನಾರ್ಪಣೆಗೈದರು.



















