
ದಿನಾಂಕ 09.12.2025 ಮತ್ತು ದಿನಾಂಕ 10.12.2025ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ನಡೆದ ಮಂಗಳೂರು ವಿಶ್ವ ವಿದ್ಯಾನಿಲಯದ ಅಂತರ್ ಕಾಲೇಜು ಖೋ- ಖೋ ಪಂದ್ಯಾಟದಲ್ಲಿ ಮಂಜುನಾಥ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಾರ್ಕಳ ಇಲ್ಲಿನ ವಿದ್ಯಾರ್ಥಿನಿಯರ ತಂಡವು ಪ್ರಿಲಿಮಿನರಿ ಹಂತದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಹಾಗೂ ಚಾಂಪಿಯನ್‌ಶಿಪ್ ಹಂತದ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆಯುವ ಮೂಲಕ ವಿಶೇಷ ಸಾಧನೆಯನ್ನು ಮಾಡಿ ಕಾಲೇಜಿನ ಗರಿಮೆಯನ್ನು ಹೆಚ್ಚಿಸಿರುತ್ತಾರೆ. ಕಾಲೇಜಿನ ಪ್ರಥಮ ಬಿ.ಕಾಂನ ವಿದ್ಯಾರ್ಥಿನಿಯಾದ ದೀಪಿಕಾ ಇವರು ಪ್ರಿಲಿಮಿನರಿ ಹಂತದ ಸ್ಪರ್ಧೆಯಲ್ಲಿ ಬೆಸ್ಟ್ ಡಿಫೆಂಡರ್ ಪ್ರಶಸ್ತಿಗೆ ಭಾಜನರಾಗಿರುತ್ತಾರೆ. ಗ್ರಾಮೀಣ ಪ್ರದೇಶದ ಈ ವಿದ್ಯಾರ್ಥಿನಿಯರ ವಿಶೇಷ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು, ಕಾಲೇಜಿನ ಸಮಸ್ತ ಉಪನ್ಯಾಸಕರು , ಸಿಬ್ಬಂದಿ ವೃಂದ , ವಿದ್ಯಾರ್ಥಿ ವೃಂದ ಹಾಗೂ ಆಡಳಿತ ಮಂಡಳಿಯು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.





