
ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮಾ ಅಗರ್ವಾಲ್ ಕುಡುಪುವಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣದಲ್ಲಿ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್, ಹೆಡ್ ಕಾನ್ಸ್ಟೇಬಲ್ ಚಂದ್ರ ಪಿ. ಕಾನ್ಸ್ಟೇಬಲ್ ಯಲ್ಲಾಲಿಂಗ ಎಂಬವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಈ ಕೃತ್ಯದ ಬಗ್ಗೆ ತಿಳಿದಿದ್ದರೂ ಮೇಲಾಧಿಕಾರಿಗಳ ಗಮನಕ್ಕೆ ತರದೆ, ಪ್ರಕರಣದ ಬಗ್ಗೆ ಯಾವುದೇ ಮಾಹಿತಿ ಕಲೆ ಹಾಕದೆ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಕಮಿಷನರ್ ತಕ್ಷಣದಿಂದ ಜಾರಿಗೆ ಬರುವಂತೆ ಇಲಾಖಾ ಶಿಸ್ತು ಕ್ರಮ ಬಾಕಿ ಇರಿಸಿ ಸೇವೆಯಿಂದ ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.





