
ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯದಲ್ಲಿ ಮಠಕ್ಕೆ ಸೇರಿದ ವಿಜಯೇಂದ್ರ ವಸತಿ ಗೃಹದ ಆನ್ಲೈನ್ ಹೆಸರಿನಲ್ಲಿ ಓರ್ವ ಭಕ್ತರಿಗೆ ವಂಚನೆ ಮಾಡಿರುವಂತಹ ಘಟನೆ ಸಂಭವಿಸಿದೆ.
ಹಾಸನ ಜಿಲ್ಲೆಯ ಅರಸೀಕೆರೆ ಮೂಲದ ಅಕ್ಷಿತಾ ಎಂಬುವರಿಗೆ ಆನ್ಲೈನ್ ಬುಕ್ಕಿಂಗ್ ಹೆಸರಲ್ಲಿ ಮುಂಗಡವಾಗಿ 2000 ರೂ. ಜಮೆ ಮಾಡಿಸಿಕೊಂಡು ಬಳಿಕ ಪ್ರತಿಕ್ರಿಯೆ ನೀಡದೆ ವಂಚಿಸಲಾಗಿದ್ದು ಈ ಬಗ್ಗೆ ಎಚ್ಚರವಹಿಸುವಂತೆ ಮಂತ್ರಾಲಯ ಮಠದಿಂದ ಭಕ್ತರಿಗೆ ಸಲಹೆ ನೀಡಲಾಗಿದೆ.
ಮಂತ್ರಾಲಯ ಆಡಳಿತ ಮಂಡಳಿ ಈ ಬಗ್ಗೆ ಪ್ರತಿಕ್ರಿಯಿಸಿ, ಶ್ರೀ ರಾಘವೇಂದ್ರ ಸ್ವಾಮಿ ಮಠ, ಮಂತ್ರಾಲಯಕ್ಕೆ ಕೊಠಡಿಗಳು ಅಥವಾ ಸೇವೆಗಳನ್ನು ಕಾಯ್ದಿರಿಸಲು ಮತ್ತು ದೇಣಿಗೆ ಸಂಗ್ರಹಿಸಲು ಯಾವುದೇ ವ್ಯಕ್ತಿ, ಏಜೆನ್ಸಿಗೆ ಅಧಿಕಾರ ನೀಡಿಲ್ಲ ಎಂದು ಸ್ಪಷ್ಟನೆ ನೀಡಿ ಶ್ರೀ ಮಠದ ಪ್ರತಿ ವಸತಿ ಗೃಹಗಳ ಬುಕ್ಕಿಂಗ್ಗೆ www.srsmatha.org. ಮೂಲಕ ಮಾತ್ರ ಬುಕ್ಕಿಂಗ್ ಮಾಡಿಕೊಳ್ಳುವಂತೆ ಭಕ್ತರಿಗೆ ಸೂಚನೆ ನೀಡಿದೆ.
ಈ ಘಟನೆ ಬೆನ್ನಲ್ಲೇ ಮಠದಿಂದ ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಘಟನೆ ಸಂಬಂಧ ಪ್ರಕರಣ ಆಂದ್ರದ ಕರ್ನೂಲ್ ಸೈಬರ್ ಠಾಣೆಗೆ ವರ್ಗಾವಣೆ ಕೂಡ ಮಾಡಲಾಗಿದೆ.








