
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಧಾನಸೌಧದಲ್ಲಿ ಮಾತನಾಡಿ ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ನಾವು ಯಾವುದೇ ಫಿಲ್ಟರ್ ಮಾಡುತ್ತಿಲ್ಲ. ಎಲ್ಲರಿಗೂ ಹಣ ಸಿಗುತ್ತದೆ. ಯಾವುದೇ ಗೊಂದಲ ಬೇಡ, ಐದು ವರ್ಷ ಮಾತಿನಂತೆ ನಡೆಯುತ್ತೇವೆ. ಗೃಹಲಕ್ಷ್ಮಿ ನಗದು ಹಾಕುವುದು ಸಲ್ಪ ವಿಳಂಬವಾಗಿತ್ತು, ಇದೀಗ ಎಲ್ಲಾ ಸರಿಯಾಗಿದೆ. ಈಗ ಎರಡು ತಿಂಗಳ ಕಂತು ಬಿಡುಗಡೆಯಾಗುತ್ತದೆ ಎಂದು ಮಾಹಿತಿ ನೀಡಿದರು.






















































