
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ ಗೃಹಲಕ್ಷ್ಮೀ ಫಲಾನುಭವಿಗಳ ಅನುಕೂಲಕ್ಕಾಗಿ ಗೃಹ ಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘ ಸ್ಥಾಪಿಸಲಾಗುತ್ತಿದ್ದು, ನ.14ರಂದು ನಡೆಯಲಿರುವ ಅಂಗನವಾಡಿ ಸುವರ್ಣಾಮಹೋತ್ಸವ ಕಾರ್ಯಕ್ರಮದಲ್ಲಿ ಸಂಘಕ್ಕೆ ಅಧಿಕೃತ ಚಾಲನೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಭೇಟಿಯಾದ ಸಹಕಾರ ಸಂಘಗಳ ಅಪರ ನಿಬಂಧಕ ಲಕ್ಷ್ಮೀಪತಯ್ಯ ಅವರು ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘದ ನೋಂದಣಿ ಪ್ರಮಾಣಪತ್ರ ಹಸ್ತಾಂತರಿಸಿದ್ದಾರೆ.
ಗೃಹಲಕ್ಷ್ಮೀ ಅಡಿಯಲ್ಲಿ 1.24 ಕೋಟಿ ಫಲಾನುಭವಿಗಳು ಯೋಜನೆಯಿಂದ ದೊರೆತ ಹಣವನ್ನು ಬೇರೆ ಮೂಲಗಳಲ್ಲಿ ತೊಡಗಿಸಿ ಆದಾಯ ಪಡೆಯುವಂತೆ ಸಂಘ ಸ್ಥಾಪಿಸಲಾಗುತ್ತಿದೆ. ಸಂಘದ ಮೂಲಕ ಫಲಾನುಭವಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷ ರು.ವರೆಗೆ ಸಾಲ ನೀಡುವುದು ಸೇರಿ ಮತ್ತಿತರ ಸೌಲಭ್ಯಗಳನ್ನು ಒದಗಿಸುವ ಉದ್ದೇಶ ಹೊಂದಿದೆ.




















































