
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗೃಹ ಸಚಿವರ ನಿರ್ದೇಶನದಂತೆ “ಮನೆ-ಮನೆ ಭೇಟಿ” ಪೊಲೀಸ್ ಯೋಜನೆ ಜಾರಿಯಾಗಿದ್ದು ಹೀಗಾಗಿ ಬೀಟ್ ಪೊಲೀಸ್ ಸಿಬ್ಬಂದಿ ಹಾಗೂ ಠಾಣಾ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಮನೆಗಳು ಮತ್ತು ಅಪಾರ್ಟ್ಮೆಂಟ್ ಗಳಿಗೆ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಚರ್ಚಿಸಿ ಅದಕ್ಕೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುತ್ತಿದ್ದಾರೆ.
ಪೊಲೀಸ್ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳಾಗಿದ್ದರೆ ತಕ್ಷಣ ಮೇಲಾಧಿಕಾರಿಗಳ ಗಮನಕ್ಕೆ ತಂದು ಆದ್ಯತೆಯ ಮೇರೆಗೆ ಪರಿಹಾರ ಒದಗಿಸಲಾಗುತ್ತದೆ. ಇತರ ಇಲಾಖೆಗೆ ಸಂಬಂಧಪಟ್ಟ ಸಮಸ್ಯೆಗಳ ಕುರಿತು ಆಯಾ ಅಧಿಕಾರಿಗಳಿಗೆ ಮಾಹಿತಿ ನೀಡಿ ಜನರಿಗೆ ಶೀಘ್ರ ಪರಿಹಾರ ದೊರಕುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ.