
ಬೆಂಗಳೂರು: ಗೃಹ ಸಚಿವ ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿದ್ದು ಈ ಮೂಲಕ ಜಾರಿ ನಿರ್ದೇಶನಾಲಯವು ಜಿ ಪರಮೇಶ್ವರ್ ಗೆ ಶಾಕ್ ನೀಡಿದೆ.
9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ತುಮಕೂರಿನಲ್ಲಿರುವ ಸಿದ್ದಾರ್ಥ ಮೆಡಿಕಲ್, ಎಂಜಿನಿಯರಿಂಗ್ ಕಾಲೇಜು, ನೆಲಮಂಗಲದ ಟಿ ಬೇಗೂರು ಬಳಿ ಇರುವ ಕಾಲೇಜು ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ನಾಲ್ಕು ವರ್ಷದ ಹಿಂದೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದು ಆ ದಾಳಿ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ವಶಕ್ಕೆ ಪಡೆದ ಹಿನ್ನೆಲೆ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು.









