“ಗೆಳತಿ” ಒಂದು ಅತ್ಯುತ್ತಮ ವೇದಿಕೆ: ಶ್ಯಾಮಲಾ ಕುಮಾರಿ ಬೇವಿಂಜೆ

ಕಾರ್ಕಳ ಎಸ್.ವಿ.ಟಿ ವನಿತಾ ಪದವಿ ಪೂರ್ವ ಕಾಲೇಜಿನಲ್ಲಿ “ಗೆಳತಿ” ಸಂಘಟನೆ ಉದ್ಘಾಟನೆ

ಕಾರ್ಕಳ: ಹದಿಹರೆಯದ ವಯಸ್ಸಿನಲ್ಲಿ ವಿದ್ಯಾರ್ಥಿಗಳಲ್ಲಿ ಅತ್ಯಂತ ಗೊಂದಲಗಳು ಉಂಟಾಗುತ್ತದೆ. ಶಾರೀರಿಕವಾಗಿ, ಮಾನಸಿಕವಾಗಿ ಬದಲಾವಣೆಗಳು ಆಗುವಂತಹ ಸಮಯವಿದು. ಅದರಲ್ಲಿಯೂ ವಿದ್ಯಾರ್ಥಿನಿಯರಲ್ಲಿ ಅವರದ್ದೇ ಆದ ಗೊಂದಲಗಳು ಇರುತ್ತವೆ. ತಮ್ಮ ಭಾವನೆಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಮತ್ತು ಗೊಂದಲಗಳಿಗೆ ಪರಿಹಾರವನ್ನು ಕಂಡುಕೊಳ್ಳಲು “ಗೆಳತಿ” ಒಂದು ಅತ್ಯುತ್ತಮ ವೇದಿಕೆಯಾಗಿದೆ ಎಂದು ಎಸ್.ವಿ.ಟಿ ವನಿತಾ ಪದವಿಪೂರ್ವ ಕಾಲೇಜು ಕಾರ್ಕಳದ ನಿವೃತ್ತ ಪ್ರಾಂಶುಪಾಲೆ ಶ್ಯಾಮಲಾ ಕುಮಾರಿ ಬೇವಿಂಜೆ ಹೇಳಿದರು.


ಅವರು ಎಸ್.ವಿ‌.ಟಿ ವನಿತಾ ಪದವಿಪೂರ್ವ ಕಾಲೇಜಿನಲ್ಲಿ “ಗೆಳತಿ” ಎಂಬ ಸಂಘಟನೆಯನ್ನು ಉದ್ಘಾಟಿಸಿ ಮಾತನಾಡಿದರು.
ಹದಿಹರೆಯದ ವಯಸ್ಸಿನಲ್ಲಿ ವಿದ್ಯಾರ್ಥಿಗಳು ದುಶ್ಚಟಗಳಿಗೆ ಒಳಗಾಗದೆ ಜೀವನವನ್ನು ರೂಪಿಸುವ, ಬದುಕನ್ನು ಕಟ್ಟಿಕೊಳ್ಳುವ ಮೌಲ್ಯಯುತ ಶಿಕ್ಷಣವನ್ನು ಪಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ನಿಕಟ ಪೂರ್ವ ಪ್ರಾಚಾರ್ಯರಾದ ರಾಮದಾಸ್ ಪ್ರಭು, ಮುಖ್ಯೋಪಾಧ್ಯಾಯರಾದ ಯೋಗೇಂದ್ರ ನಾಯಕ್, ಗೆಳತಿ ಸಂಘದ ಕಾರ್ಯದರ್ಶಿ ಕು. ಪ್ರತೀಕ್ಷಾ, ಸಹ ಕಾರ್ಯದರ್ಶಿ ಭಾಗ್ಯಶ್ರೀ ಕುಡ್ವ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ನೇಮಿರಾಜ ಶೆಟ್ಟಿ ವಹಿಸಿದ್ದರು. ಗೆಳತಿಯ ಸಂಯೋಜಕಿ ಸುಮಂಗಲ ಪ್ರಭು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಆಂಗ್ಲ ಭಾಷಾ ಉಪನ್ಯಾಸಕಿ ಸುಧಾ ಭಟ್ ಸ್ವಾಗತಿಸಿದರು. ಸಹ ಸಂಯೋಜಕಿ ಪ್ರಿಯಾ ಪ್ರಭು ವಂದಿಸಿದರು. ಪ್ರಭಾ ಜಿ ನಿರೂಪಿಸಿದರು.