
ನವದೆಹಲಿ: ಜಾರ್ಖಂಡ್‌ನ ಗರ್ವ್ಹಾದಲ್ಲಿ ಕೆಲ ವ್ಯಕ್ತಿಗಳು ಗೋಲ್‌ಗಪ್ಪಾ ರುಚಿಯನ್ನು ಹೆಚ್ಚಿಸಲು ಅದಕ್ಕೆ ಶೌಚಾಲಯ ಸ್ವಚ್ಛಗೊಳಿಸುವ ಹಾರ್ಪಿಕ್ ಮತ್ತು ಯೂರಿಯಾ ಗೊಬ್ಬರ ಬಳಸುತ್ತಿರುವ ಕುರಿತು ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಮನೆಯೊಂದರ ಮೇಲೆ ದಾಳಿ ನಡೆಸಿದ್ದು ಈ ವೇಳೆ ಇಬ್ಬರು ವ್ಯಕ್ತಿಗಳು ಗೋಲ್‌ಗಪ್ಪಾ ತಯಾರಿಸಲು ಬಳಸುವ ಹಿಟ್ಟನ್ನು ಕಾಲಿನಲ್ಲಿ ತುಳಿಯುತ್ತಿದ್ದದ್ದು ಬೆಳಕಿಗೆ ಬಂದಿದೆ. ವಿಚಾರಣೆ ವೇಳೆ ಗೋಲ್‌ಗಪ್ಪಾ ರುಚಿ ಹೆಚ್ಚಿಸಲು ಅದಕ್ಕೆ ಯೂರಿಯಾ ಮತ್ತು ಹಾರ್ಪಿಕ್ ಬಳಸಿದ್ದನ್ನು ಒಪ್ಪಿಕೊಂಡಿದ್ದಾರೆ.
ಹಿರಿಯರು ಮತ್ತು ಮಕ್ಕಳು ಜಂಕ್ ಅಥವಾ ಫಾಸ್ಟ್ ಫುಡ್ ಸೇವಿಸುವುದು ಅನಾರೋಗ್ಯಕ್ಕೆ ಮಾರ್ಗ ಹಾಕಿದಂತಾಗುತ್ತದೆ. ಕಡಿಮೆ ದರಕ್ಕೆ ಸಿಗುವ ಎಗ್‌ರೈಸ್, ಗೋಬಿ ಮಂಚೂರಿ, ಮಾಮ್, ಪಾನಿಪುರಿ, ಕೆಲವು ಬೇಕರಿ ಪದಾರ್ಥಗಳಂತಹ ಫಾಸ್ಟ್‌ಫುಡ್‌ಗೆ ಬಣ್ಣ, ರುಚಿ ಹಾಗೂ ಸುವಾಸನೆ ಬರಲು ಕಡಿಮೆ ದರದ ರಾಸಾಯನಿಕಗಳನ್ನು ಬಳಸಿರುವ ಸಾಧ್ಯತೆ ಇರುತ್ತದೆ, ಯಾವುದೇ ಕಾರಣಕ್ಕೂ ಇಂತಹ ಆಹಾರ ಸೇವನೆ ಮಾಡಬಾರದು ಎಂದು ಆರೋಗ್ಯ ತಜ್ಞರು ಸಲಹೆ ಸೂಚಿಸಿದ್ದಾರೆ.






















































