
ಯುವ ಬ್ರಿಗೇಡ್ ಸಂಘಟನೆಯ ಸಂಸ್ಥಾಪಕರಾದ ಚಕ್ರವರ್ತಿ ಸೂಲಿಬೆಲೆ ಅವರ ತಂದೆ ದೇವದಾಸ್ ಸುಬ್ರಾಯ ಶೇಟ್ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಕಳೆದ 20 ವರ್ಷಗಳ ಹಿಂದೆ ಶಿಕ್ಷಕ ವೃತ್ತಿಯಿಂದ ನಿವೃತ್ತಿ ಹೊಂದಿದ್ದು ಸೂಲಿಬೆಲೆ ಹೊರ ಭಾಗದಲ್ಲಿ ಶಾರದ ಮಂದಿರ ಹೆಸರಲ್ಲಿ ಮನೆ ನಿರ್ಮಿಸಿಕೊಂಡು ವಿಶ್ರಾಂತಿ ಜೀವನ ಸಾಗಿಸುತ್ತಿದ್ದರು. ಸುಮಾರು ಆರು ವರ್ಷಗಳ ಕಾಲ ವಿವೇಕಾನಂದ ಪ್ರೌಢ ಶಾಲೆ ಮುಖ್ಯ ಶಿಕ್ಷಕರಾಗಿ ಕನ್ನಡ ಶಿಕ್ಷಕರಾಗಿ ಕೆಲಸ ಮಾಡಿದ್ದರು. ಮೂಲತಃ ಹೊನ್ನಾವರದವರಾದ ಇವರು ಶಿಕ್ಷಕ ವೃತ್ತಿ ಸೂಲಿಬೆಲೆ ವಿವೇಕಾನಂದ ಪ್ರೌಢಶಾಲೆಯಲ್ಲಿ ಆರಂಬಿಸಿದರು. ಶಿಕ್ಷಕ ವೃತ್ತಿಯಲ್ಲಿದ್ದಾಗಲೇ ಸೂಲಿಬೆಲೆಯಲ್ಲಿ ಮನೆ ನಿರ್ಮಿಸಿ ಕೊಂಡು ವಾಸವಾಗಿದ್ದರು. ಸೂಲಿಬೆಲೆ ಬ್ರಾಹ್ಮಣರ ಸ್ಮಶಾನದಲ್ಲಿ ಇಂದು ಸಂಜೆ ಅಂತಿಮ ಸಂಸ್ಕಾರ ನಡೆಯಲಿದೆ.
ಮಾಜಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.