
ಮೈಸೂರು: ಮೈಸೂರಿನಲ್ಲಿ ರಾಜಮಾತೆ ಪ್ರಮೋದಾದೇವಿ ಒಡೆಯರ್ ಚಾಮುಂಡಿ ಬೆಟ್ಟ ಹಿಂದೂಗಳ ಸ್ವತ್ತಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು ‘ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು. ಚಾಮುಂಡಿ ಹಿಂದು ದೇವರು. ಯದುವಂಶಕ್ಕೆ ಮನೆ ದೇವರು. ಚಾಮುಂಡಿ ದೇವಿ ಯದುವಂಶಕ್ಕೆ ಧಾರ್ಮಿಕ ತಾಯಿ ಇದ್ದಂತೆ’ ಎಂದು ಸ್ಪಷ್ಟನೆ ನೀಡಿದ್ದಾರೆ.
ಡಿಕೆ ಶಿವಕುಮಾರ್ ಹೇಳಿಕೆಗೆ ಬೇಸರ ವ್ಯಕ್ತಪಡಿಸಿರುವ ಅವರು ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ವಿಧಿವಿಧಾನದಿಂದ ಪೂಜೆ ನಡೆಯುತ್ತದೆ. ರಾಜಕಾರಣಿಗಳ ಏನೂ ಬೇಕಾದರು ಹೇಳಲಿ. ಕರೆಯುವವರು ಏನಾದರೂ ಕರೆಯಲಿ. ಅವರು ಹೇಳಿದಂತೆ ಆಗಲ್ಲ. ದಸರಾ ಉದ್ಘಾಟಕರ ವಿಚಾರದಲ್ಲಿ ನನ್ನ ಅಭಿಪ್ರಾಯ ಏನೂ ಇಲ್ಲ. ಕರೆದವರು, ಕರೆಸಿಕೊಂಡವರಿಗಷ್ಟೆ ಅದು ಗೊತ್ತು. ಸರ್ಕಾರದ ದಸರಾ ನಮ್ಮ ಪರಂಪರೆ ಭಾಗವಲ್ಲ. ನಮ್ಮ ದಸರಾ ಖಾಸಗಿಯಾಗಿಯೇ ನಡೆಯುತ್ತದೆ. ಸರ್ಕಾರವರು ತಮಗೆ ಬೇಕಾದ ರೀತಿ ದಸರಾ ಮಾಡುತ್ತಾರೆ. ಅದಕ್ಕೂ ನಮಗೂ ಸಂಬಂಧ ಇಲ್ಲ. ದಸರಾ ದಿನ ನಾನು ಅಂಬಾರಿ ಕಡೆ ಗಮನ ಕೊಡುವ ಕಾರಣ ಅಲ್ಲಿಗೆ ಹೋಗಲ್ಲ. ನಮ್ಮ ಮನೆಯವರು ಒಬ್ಬರು ಹೋಗುತ್ತಾರೆ ಅಷ್ಟೆ ಎಂದು ತಿರುಗೇಟು ನೀಡಿದ್ದಾರೆ.