35 ತಂಡಗಳಲ್ಲಿ ಅತ್ಯುನ್ನತ 5 ತಂಡಗಳಲ್ಲಿ ಚತುರ್ಥ ಸ್ಥಾನ ಪಡೆದ ಜೇಸಿ ಆಂಗ್ಲ ಮಾಧ್ಯಮ ಶಾಲೆ ಕಾರ್ಕಳ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಂಗಳೂರು ,ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಚಿತ್ರದುರ್ಗ ,ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ದಿನಾಂಕ 7 ಹಾಗೂ 8 ರಂದು ಅನುಭವ ಮಂಟಪ ಶ್ರೀ ಮುರುಗ ರಾಜೇಂದ್ರ ಬೃಹನ್ಮಠ ಚಿತ್ರದುರ್ಗ ಇಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ , 35 ತಂಡಗಳಲ್ಲಿ ಅತ್ಯುನ್ನತ 5 ತಂಡಗಳಲ್ಲಿ ಚತುರ್ಥ ಸ್ಥಾನವನ್ನು ಪಡೆದು ಶಾಲೆಗೆ ಹಾಗೂ ಊರಿಗೆ ಹೆಮ್ಮೆ ತಂದಿರುತ್ತಾರೆ.
ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.
