
ಬೆಂಗಳೂರು: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,450 ರೂ ಇದ್ದದ್ದು 7,525 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 8,200 ರೂ ಗಡಿ ದಾಟಿದೆ.
ವಿದೇಶಗಳಲ್ಲೂ ಹಲವೆಡೆ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದ್ದು ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 75,250 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 82,090 ರುಪಾಯಿ ಆಗಿದೆ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 75,250 ರುಪಾಯಿಯಾಗಿದ್ದು ಬೆಳ್ಳಿ ಬೆಲೆ 100 ಗ್ರಾಮ್ಗೆ 9,650 ರುಪಾಯಿ ಇದೆ.





















