33.6 C
Udupi
Saturday, May 9, 2026
spot_img
spot_img
HomeBlogಚೀನಾ ಹೊರತುಪಡಿಸಿ ಬೇರೆಲ್ಲಾ ದೇಶಗಳಿಗೆ 90 ದಿನಗಳ ಸುಂಕ ವಿರಾಮವನ್ನು ಘೋಷಿಸಿದ ಡೊನಾಲ್ಡ್ ಟ್ರಂಪ್

ಚೀನಾ ಹೊರತುಪಡಿಸಿ ಬೇರೆಲ್ಲಾ ದೇಶಗಳಿಗೆ 90 ದಿನಗಳ ಸುಂಕ ವಿರಾಮವನ್ನು ಘೋಷಿಸಿದ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಇತ್ತೀಚೆಗಷ್ಟೇ ಎಲ್ಲಾ ದೇಶಗಳ ಪ್ರತಿಸುಂಕವನ್ನು ಹೆಚ್ಚಿಸಿ ಆದೇಶ ಹೊರಡಿಸಿದ್ದ ಡೊನಾಲ್ಡ್ ಟ್ರಂಪ್ ಇದೀಗ ಚೀನಾ ಜತೆಗಿನ ಅಮೆರಿಕದ ವ್ಯಾಪಾರ ಯುದ್ಧ ಮತ್ತಷ್ಟು ತೀವ್ರಗೊಂಡಿದ್ದು ಹೀಗಾಗಿ ಡೊನಾಲ್ಡ್ ಟ್ರಂಪ್ ಆಡಳಿತವು ಚೀನಾ ಹೊರತುಪಡಿಸಿ ಬೇರೆಲ್ಲಾ ದೇಶಗಳಿಗೆ 90 ದಿನಗಳ ಸುಂಕ ವಿರಾಮ ಘೋಷಿಸಿದ್ದಾರೆ.

ಅಮೆರಿಕ ಮತ್ತು ಚೀನಾ ನಡುವಿನ ವ್ಯಾಪಾರ ಯುದ್ಧ ತೀವ್ರಗೊಳ್ಳುವ ಸ್ಪಷ್ಟ ಲಕ್ಷಣಗಳು ಗೋಚರಿಸುತ್ತಿದ್ದು ಚೀನಾದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲಿನ ಸುಂಕವನ್ನು ಶೇಕಡಾ 125 ರಷ್ಟು ಹೆಚ್ಚಿಸುವುದಾಗಿ ಟ್ರಂಪ್ ಘೋಷಿಸಿದ್ದಾರೆ.

ಇದಕ್ಕೂ ಮುನ್ನ ಚೀನಾ ಅಮೆರಿಕದ ಉತ್ಪನ್ನಗಳ ಮೇಲೆ ಶೇ. 84 ರಷ್ಟು ಸುಂಕ ವಿಧಿಸುವುದಾಗಿ ಹೇಳುವ ಮೂಲಕ ಪ್ರತೀಕಾರ ತೀರಿಸಿಕೊಂಡಿತ್ತು. ಟ್ರಂಪ್ ಅವರ ಈ ಕ್ರಮದಿಂದಾಗಿ ಅಮೆರಿಕದಲ್ಲಿ ಚೀನಾದ ಸರಕುಗಳು ತುಂಬಾ ದುಬಾರಿಯಾಗಲಿವೆ.

ಅಮೆರಿಕದ ಗ್ರಾಹಕರು ಚೀನಾದ ವಸ್ತುಗಳನ್ನು ಖರೀದಿಸಲು ಹೆಚ್ಚಿನ ಬೆಲೆಗಳನ್ನು ತೆರಬೇಕಾಗುತ್ತದೆ. ಇದು ಅವರ ಜೇಬಿನ ಮೇಲಿನ ಹೊರೆಯನ್ನು ಹೆಚ್ಚಿಸುತ್ತದೆ. ಚೀನಾದಿಂದ ಅಮೆರಿಕ ಕಡಿಮೆ ಸರಕುಗಳನ್ನು ಖರೀದಿಸುತ್ತದೆ ಏಕೆಂದರೆ ಅವು ಹೆಚ್ಚು ದುಬಾರಿಯಾಗುತ್ತವೆ. ಚೀನಾದಿಂದ ಸರಕುಗಳನ್ನು ಆಮದು ಮಾಡಿಕೊಳ್ಳುವ ಮೂಲಕ ತಮ್ಮ ಸರಕುಗಳನ್ನು ಉತ್ಪಾದಿಸುವ ಅಮೆರಿಕನ್ ಕಂಪನಿಗಳ ವೆಚ್ಚಗಳು ಹೆಚ್ಚಾಗಲಿದ್ದು ಇದು ಅವರ ಸ್ಪರ್ಧಾತ್ಮಕತೆಯನ್ನು ಕಡಿಮೆ ಮಾಡುವ ಸಾಧ್ಯತೆಯಿದೆ.

ಇತರ ದೇಶಗಳಿಗೆ ಅಮೆರಿಕ ವಿಧಿಸಿರುವ ಸುಂಕಗಳಿಗೆ 90 ದಿನಗಳ ವಿನಾಯಿತಿ ನೀಡಿದ್ದು, ಆ ಬಳಿಕ ಸುಂಕ ಹೆಚ್ಚಳ ಮಾಡಲಾಗುವುದು ಎಂದು ಡೊನಾಲ್ಡ್‌ ಟ್ರಂಪ್ ಅಧಿಕೃತ ಹೇಳಿಕೆ ನೀಡಿದ್ದು ಈಗಾಗಲೇ ಸುಂಕ ವಿನಾಯಿತಿಗಾಗಿ ಶ್ವೇತಭವನದ ಕದ ತಟ್ಟಿರುವ 75 ದೇಶಗಳಿಗೆ ಇದರಿಂದ ಅನುಕೂಲವಾಗಲಿದೆ ಎನ್ನಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page