
ಉಪಮುಖ್ಯಮಮತ್ರಿ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾಯುತಿ ಮುನ್ನಡೆ ಸಾಧಿಸುತ್ತಿದ್ದ ಬೆನ್ನಲ್ಲೇ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವ ಕುರಿತು ಮಾತನಾಡಿದ್ದಾರೆ.
ಎಪಿಬಿ ಲೈವ್ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಅವರು, ನಾವ್ಯಾರೂ ಈ ಫಲಿತಾಂಶ ನಿರೀಕ್ಷಿಸಿರಲಿಲ್ಲ. ಇದು ನಮ್ಮ ನಿರೀಕ್ಷೆಗಳನ್ನು ಮೀರಿದೆ. ಒಂದೂವರೆ ಗಂಟೆಯ ನಂತರ ಮೂರೂ ಪಕ್ಷಗಳು ಕುಳಿತು ಭವಿಷ್ಯದ ಕಾರ್ಯತಂತ್ರವನ್ನು ನಿರ್ಧರಿಸಲಿವೆ. ಪಕ್ಷದ ಕಚೇರಿಗೆ ಹೋಗಿ ಬಳಿಕ ನಾಗ್ಪುರಕ್ಕೆ ಹೋಗುತ್ತೇನೆ. ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.
ನಾಳೆ ಮಹಾಯುತಿಯ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು ನವೆಂಬರ್ 25 ರಂದು ಅವರು ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಲಿದ್ದಾರೆ ಮತ್ತು ನವೆಂಬರ್ 26 ರಂದು ಸರ್ಕಾರ ರಚನೆಯಾಗಲಿದೆ ಎಂದು ಹೇಳಿದರು.



















