
ಮಂಗಳೂರು: ಜಿಲ್ಲಾಡಳಿತ ವತಿಯಿಂದ ನವೆಂಬರ್ 17-18 ರಂದು ಮೂಡುಶೆಡ್ಡೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿಳಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಳಿಕುಳ ಕಂಬಳವನ್ನು ಗ್ರಾಮ ಪಂಚಾಯಿತಿಯ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.
ಗ್ರಾಮ್ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಅಥವಾ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆಯನ್ನು ನಡೆಸಲು ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಆದೇಶಿಸಿದ್ದು ಹೀಗಾಗಿ ಚುನಾವಣೆ ನಡೆಯುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನವೆಂಬರ್ 16 ರಿಂದ 26ರವರೆಗೆ ಚುನಾವಣೆ ನೀತಿ ಸಂಹಿತೆಯು ಜಾರಿಯಲ್ಲಿರುತ್ತದೆ. ಹೀಗಾಗಿ ಪಿಳಿಕುಳ ಕಂಬಳವನ್ನು ಮುಂದೂಡಲಾಗಿದ್ದು ಮುಂದೂಡಲಾದ ದಿನಾಂಕವನ್ನು ನಂತರದ ದಿನಗಳಲ್ಲಿ ತಿಳಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.



















