
ಕಾರ್ಕಳ:ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಇದರ ಆಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ ನಡೆದ 17ರ ವಯೋಮಿತಿಯೊಳಗಿನ ಬಾಲಕ – ಬಾಲಕಿಯರ ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಕಾರ್ಕಳ
ಜ್ಷಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ
ತರಗತಿಯ ವಿದ್ಯಾರ್ಥಿಗಳಾದ ಎಸ್ ಆರ್ ಸುಮುಖ ಬಾಲಕರ ವಿಭಾಗದಲ್ಲಿ, ಅನ್ವಿ ಹೆಚ್.
ಅಂಚನ್ ಬಾಲಕಿಯರ ವಿಭಾಗದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಅಭಿನಂಧಿಸಿದರು.





