
ಚೊಚ್ಚಲ ಚುನಾವಣೆಯಲ್ಲಿ ಗೆಲುವು ಸಾಧಿಸುವುದರ ಮೂಲಕ ವಯನಾಡ್ ನ ಸಂಸದೆಯಾಗಿ ಪ್ರಿಯಾಂಕ ಗಾಂಧಿ ವಾದ್ರ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಕೇರಳದ ಬ್ರೋಕೆಡ್ ಸೀರೆಯನ್ನು ಧರಿಸಿ, ಪತಿ ರಾಬರ್ಟ್ ವಾದ್ರ, ತಾಯಿ ಸೋನಿಯಾ ಗಾಂಧಿ ಮತ್ತು ಸಹೋದರ ರಾಹುಲ್ ಗಾಂಧಿಯ ಜೊತೆ ಸಂಸತ್ ಭವನವನ್ನು ತಲುಪಿ ಸಂವಿಧಾನದ ಪುಸ್ತಕ ಹಿಡಿದು ಪ್ರಮಾಣವಚನ ಸ್ವೀಕರಿಸಿದ್ದಾರೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಂದ ಪ್ರಿಯಾಂಕ ಪ್ರಮಾಣವಚನ ಸ್ವೀಕರಿಸಿದರು.



















