ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ ಮೈಕ್ರೋ ಫೈನಾನ್ಸ್ ವ್ಯವಹಾರದವರು ರಾಜ್ಯದಲ್ಲಿ ಜನರಿಗೆ ಕಿರುಕುಳ ನೀಡಿದರೆ ಕಾನೂನು ರೀತಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಜನರನ್ನು ಹೆದರಿಸಿ ಕಿರುಕುಳ ನೀಡುವುದನ್ನು ನಾವು ಸಹಿಸುವುದಿಲ್ಲ. ಕೇವಲ ಮೈಸೂರು ಮಾತ್ರವಲ್ಲ ಎಲ್ಲೇ ಮಾಡಿದರೂ ಅದು ತಪ್ಪೇ. ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ವ್ಯವಹಾರಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.