27.3 C
Udupi
Thursday, April 30, 2026
spot_img
spot_img
HomeBlogಜಿಲ್ಲಾಧಿಕಾರಿ ಕಚೇರಿಯಲ್ಲಿ ಗ್ರಂಥಾಲಯ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗ್ರಂಥಾಲಯ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ 125ನೇ ಸರಣಿ ಕಾರ್ಯಕ್ರಮ “‘ಮನೆಯೇ ಗ್ರಂಥಾಲಯ” ಡಿ.2 ರ ಸೋಮವಾರ ಬೆಳಗ್ಗೆ 11 ಗಂಟೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉದ್ಘಾಟನೆಗೊಳ್ಳಲಿದೆ .

ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿಯವರು ಗ್ರಂಥಾಲಯವನ್ನು ಉದ್ಘಾಟಿಸಲಿದ್ದಾರೆ.

ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ.

ಇವರು ಕನ್ನಡ ಸ್ನಾತಕೋತ್ತರ ಪದವೀಧರರು. ಅವರು ಈ ಹಿಂದೆ ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದಾಗ ಅವರ ಕಚೇರಿಯ ಮುಂಭಾಗದಲ್ಲಿ ಒಂದು ಕೋಣೆಯನ್ನೇ ಗ್ರಂಥಾಲಯ ಮಾಡಿರುವುದು ಅವರ ಪುಸ್ತಕ ಪ್ರೀತಿಗೆ ಸಾಕ್ಷಿ.

ಕ.ಸಾ.ಪ ಉಡುಪಿ ತಾಲೂಕು ಘಟಕ ನಡೆಸುತ್ತಿರುವ “ಮನೆಯೇ ಗ್ರಂಥಾಲಯ” ಅಭಿಯಾನವನ್ನು ಮೆಚ್ಚಿ, ಈ ಕಾರ್ಯಕ್ರಮ ತಮ್ಮ ಕಚೇರಿಯಲ್ಲಿಯೂ ಆಗಬೇಕೆಂಬ ಅಭಿಲಾಷೆ ಇದ್ದು,
ಅವರ ಅಪೇಕ್ಷೆಯಂತೆ 125ನೇ “ಮನೆಯೇ ಗ್ರಂಥಾಲಯ”ವು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅನಾವರಣವಾಗುತ್ತಿರುವುದು ಬಹಳ ಸಂತಸದ ಸಂಗತಿ ಎಂದು ಕಸಾಪ ಉಡುಪಿ ತಾಲೂಕು ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನು ಮುಂದೆ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಲು ಬರುವ ಸಾರ್ವಜನಿಕರು, ಜಿಲ್ಲಾಧಿಕಾರಿಗಳ ಸಿಬ್ಬಂದಿಗಳು ತಮ್ಮ ಬಿಡುವಿನ ಸಮಯದಲ್ಲಿ ಅಲ್ಲಿಯೇ ಪಕ್ಕದಲ್ಲಿರುವ ಗ್ರಂಥಾಲಯದಿಂದ ಕನ್ನಡ ಪುಸ್ತಕಗಳನ್ನು ಆರಿಸಿ, ತೆರೆದು ಓದಬಹುದು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page