ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸೃಜನಳ ಸಾಧನೆ

ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಉಡುಪಿ ಇದರ ಜಂಟಿ ಆಶ್ರಯದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಜಿಲ್ಲಾಮಟ್ಟದ ಕರಾಟೆ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರಿನ ವಿದ್ಯಾರ್ಥಿನಿ ಸೃಜನ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾಳೆ.
ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜು ಅಭಿವೃದ್ಧಿ ಸಮಿತಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.



















