600 ಮೀ. ಓಟದಲ್ಲಿ ಪ್ರಥಮ ಸ್ಥಾನ, ರಾಜ್ಯಮಟ್ಟಕ್ಕೆ ಆಯ್ಕೆ

ನ. 4ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಶ್ರೀವಿದ್ಯಾ ಸಮುದ್ರ ತೀರ್ಥ ಪ್ರೌಢಶಾಲಾ ಕಿದಿಯೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪ್ರಾಥಮಿಕ ಶಾಲೆಯ ಕ್ರೀಡಾಕೂಟದಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಪೆರ್ವಾಜೆ ಇಲ್ಲಿಯ 7ನೇ ತರಗತಿಯ ವಿದ್ಯಾರ್ಥಿ ಸೃಜನ್ ಕುಮಾರ್ 600 ಮೀ. ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ಶಿವಮೊಗ್ಗದಲ್ಲಿ ನಡೆಯುವಂತಹ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.









