
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ ಸರಕಾರ ಇವರ ಪ್ರಾಯೋಜಕತ್ವದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ 2024 25 ನೇ ಸಾಲಿನ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಶ್ರಾವ್ಯ ಎಸ್ ಸಾಲ್ಯಾನ್ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಹಾಗೂ 10ನೇ ತರಗತಿಯ ಖುಷಿ ಸಂತೋಷ್ ಪೂಜಾರಿ ತೃತೀಯ ಸ್ಥಾನವನ್ನು ಪಡೆದಿರುತ್ತಾಳೆ.



















